ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI | 23 ಡಿಸೆಂಬರ್ 2019
ಬೆಳವಣಿಗೆ ಹಂತದಲ್ಲಿದ್ದ ಆರು ತಿಂಗಳ ಶಿಶುವಿನ ಭ್ರೂಣ ಪತ್ತೆಯಾಗಿದೆ. ರಸ್ತೆ ಬದಿಯಲ್ಲಿ ಭ್ರೂಣವನ್ನು ಬಿಸಾಕಿ ಹೋಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಉಂಬ್ಳೆಬೈಲು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಮುಂಭಾಗ ಭ್ರೂಣ ಪತ್ತೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಸ್ತೆಯಲ್ಲಿ ಸಂಚರಿಸುತ್ತಿದ್ದ ಜನರು, ಭ್ರೂಣ ಬಿಸಾಡಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಆಗಮಿಸಿದ ತಾಲೂಕು ಆರೋಗ್ಯಾಧಿಕಾರಿ ಡಾ.ಗಾಯತ್ರಿ, ಉಜ್ಜನೀಪುರ ನಗರ ಆರೋಗ್ಯ ಕೇಂದ್ರದ ವೈದ್ಯ ಡಾ.ಗಿರಿಧರ್ ಮತ್ತು ಸಿಬ್ಬಂದಿ, ಗರ್ಭ ಚೀಲದೊಂದಿಗೆ ಇದ್ದ ಶಿಶುವಿನ ಭ್ರೂಣವು ಐದಾರು ತಿಂಗಳಿನದ್ದಿರಬೇಕು ಎಂದು ಸ್ಪಷ್ಟಪಡಿಸಿದರು. ಅಲ್ಲದೆ ಮಗು ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಗೆ ರವಾನಿಸಬಹುದು ಎಂದು ತಿಳಿಸಿದರು.
ಭ್ರೂಣ ಪತ್ತೆಯಾದ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದರು. ಇದರಿಂದ ಉಂಬ್ಳೆಬೈಲು ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಮತ್ತೊಂದೆಡೆ ಭ್ರೂಣ ತೆಗೆಸಿ ಬಿಸಾಕಿ ಹೋಗಿರುವವರ ಪತ್ತೆಗೆ ಅರೋಗ್ಯಾಧಿಕಾರಿಗಳು ಮತ್ತು ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]