ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | BHADRAVATHI | 3 ಜುಲೈ 2022
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಭದ್ರಾವತಿಯಲ್ಲಿ ಇವತ್ತು ಪ್ರತಿಭಟನೆ (PROTEST) ನಡೆಸಲಾಯಿತು. ಈ ವೇಳೆ ಅನ್ಯ ಕೋಮಿನ ಯುವಕರಿಬ್ಬರು ಪ್ರತಿಭಟನೆ ಮತ್ತು ಪ್ರತಿಭಟನಾಕಾರರ ವಿರುದ್ಧ ಕೇವಲವಾಗಿ ಮಾತನಾಡಿದರು ಎಂದು ಆರೋಪಿಸಿ, ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
.png)
ಟೈಲರ್ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಬಜರಂಗದಳ ಸಂಘಟನೆ ವತಿಯಿಂದ ಭದ್ರಾವತಿ ರಂಗಪ್ಪ ಸರ್ಕಲ್’ನಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾನವ ಸರಪಳಿ ನಿರ್ಮಿಸಿ, ಆರೋಪಿಗಳ ಪ್ರತಿಕೃತಿ ದಹಿಸಿ ಬಜರಂಗದಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
‘ಬೇರು ಸಹಿತ ಕಿತ್ತೊಗೆಯಬೇಕು’
ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣ ಇಡೀ ದೇಶವನ್ನೆ ಬೆಚ್ಚಿ ಬೀಳುವಂತೆ ಮಾಡಿದೆ. ಗ್ರಾಹಕರ ಸೋಗಿನಲ್ಲಿ ಬಂದು ಹತ್ಯೆ ಮಾಡಿರುವುದು ಆರೋಪಿಗಳ ಅಮಾನವೀಯ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಇಂತಹ ಹೀನ ಕೃತ್ಯ ಎಸಗಿದವರು ಮತ್ತು ಇವರಿಗೆ ಬೆನ್ನೆಲುಬಾಗಿರುವ ಸಂಘಟನೆಗಳನ್ನು ಬೇರು ಸಹಿತ ಕಿತ್ತೊಗೆಯಬೇಕು. ಇನ್ಮುಂದೆ ಇಂತಹ ಘಟನೆಗಳು ದೇಶದಲ್ಲಿ ಮರುಕಳಿಸದಂತೆ ಸರ್ಕಾರ ನಿಗಾ ವಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಬಿಗುವಿನ ವಾತಾವರಣ
ಪ್ರತಿಭಟನೆ ಮುಗಿಯುವ ಹಂತದಲ್ಲಿ ಅನ್ಯ ಕೋಮಿಗೆ ಸೇರಿದ ಇಬ್ಬರು ಯುವಕರು ಪ್ರತಿಭಟನೆ ಮತ್ತು ಪ್ರತಿಭಟನಾಕಾರರ ವಿರುದ್ಧ ಕೇವಲವಾಗಿ ಮಾತನಾಡಿದರು ಎಂದು ಹೇಳಲಾಗುತ್ತಿದೆ. ಇದರಿಂದ ಪ್ರತಿಭಟನಾಕಾರರು (PROTEST) ಯುವಕರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. ಹಾಗಾಗಿ ರಂಗಪ್ಪ ಸರ್ಕಲ್’ನಲ್ಲಿ ಕೆಲವು ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಘಟನೆ ವೇಳೆ ಬಟ್ಟೆ ಅಂಗಡಿಯೊಂದರ ಗಾಜು ಪುಡಿಯಾಗಿದೆ ಎಂದು ತಿಳಿದು ಬಂದಿದೆ.
ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಸದ್ಯ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.
ಬಜರಂಗದಳ ಮುಖಂಡರಾದ ವಡಿವೇಲು, ಕಿರಣ್, ಮಣಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ನಿಯಂತ್ರಣ ತಪ್ಪಿ ರಸ್ತೆಯಿಂದ ಅಡಕೆ ತೋಟಕ್ಕೆ ಹಾರಿದ ಕಾರು, ಓರ್ವ ಸಾವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















