ಶಿವಮೊಗ್ಗ ಲೈವ್.ಕಾಂ | BHADRAVATHI NEWS | 10 ಸೆಪ್ಟಂಬರ್ 2020
ಮಾಜಿ ಶಾಸಕ ಅಪ್ಪಾಜಿಗೌಡ ನಿಧನಕ್ಕೆ ಬಜರಂಗದಳ ಕಾರ್ಯಕರ್ತರು ಸಂತಾಪ ಸೂಚಿಸಿದ್ದಾರೆ. ಭದ್ರಾವತಿಯಲ್ಲಿ ಅಪ್ಪಾಜಿಗೌಡರ ನಿವಾಸಕ್ಕೆ ಭೇಟಿ ನೀಡಿದ ಬಜರಂಗದಳ ಕಾರ್ಯಕರ್ತರು, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಮೌನಾಚರಣೆ ಮಾಡಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಈ ವೇಳೆ ಮಾತನಾಡಿದ ಬಜರಂಗದಳ ಜಿಲ್ಲಾ ಸಂಚಾಲಕ ಸುನಿಲ್ ಕುಮಾರ್, ಅಪ್ಪಾಜಿಗೌಡ ಅವರು ಬಡವರು, ಸಮಾಜದ ಕುರಿತು ಕಾಳಜಿ ಹೊಂದಿದ್ದರು. ಕ್ಷೇತ್ರದ ಭವಿಷ್ಯದ ಕುರಿತು ಭಗೀರಥನಂತೆ ಕನಸು ಕಂಡಿದ್ದರು. ಅವರನ್ನು ಕಳೆದುಕೊಂಡಿದ್ದು ದುಃಖದ ಸಂಗತಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದರು.
ಬಜರಂಗದಳ ತಾಲೂಕು ಸಂಚಾಲಕ ವಡಿವೇಲು, ಬಜರಂಗಳದ ಜಿಲ್ಲಾ ಮತ್ತು ತಾಲೂಕು ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]