ಶಂಕರಘಟ್ಟದ ಕುವೆಂಪು ವಿವಿ ಸಮೀಪ ಧಗಧಗ ಹೊತ್ತಿ ಉರಿದ ಬೇಕರಿ

ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ ಮುಂಭಾಗ ಬೇಕರಿಯಲ್ಲಿ (Bakery) ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಬೇಕರಿಯಲ್ಲಿದ್ದ ವಸ್ತುಗಳು ಸುಟ್ಟು ಹೋಗಿವೆ.

ಶಂಕರಘಟ್ಟ ಮುಖ್ಯ ರಸ್ತೆಯಲ್ಲಿರುವ ಬೇಕರಿಯಲ್ಲಿ ರಾತ್ರಿ 3 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದೆ. ಅಕ್ಕಪಕ್ಕದ ಮನೆಯವರು, ಸ್ಥಳೀಯರು ಎಚ್ಚರವಾಗಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

ಬೇಕರಿ ಒಳಗಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದು ಬಂದಿದೆ. ಶಾರ್ಟ್‌ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿರುವ ಶಂಕೆ ಇದೆ. ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Cake Mane incident at shankaraghatta
ಅಂಗಡಿ ಒಳಗಿಂದ ಹೊಗೆ ಬರುತ್ತಿರುವುದು
Cake Mane incident at shankaraghatta
ಬೆಂಕಿ ನಂದಿಸುತ್ತಿರುವ ಸ್ಥಳೀಯರು
Cake Mane incident at shankaraghatta
ಬೇಕರಿಯಲ್ಲಿ ಕಾಣಿಸಿಕೊಂಡ ಬೆಂಕಿ
Cake Mane incident at shankaraghatta
ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯಾಚರಣೆ | ಫೋಟೊ : ಶರತ್‌

ಇದನ್ನೂ ಓದಿ » ಶಿವಮೊಗ್ಗ ಸಿಟಿಯಲ್ಲಿ ಕರೆಂಟ್‌ ಕಂಬಗಳ ತೆರವಿಗೆ ಒತ್ತಾಯ, ಡಿಸಿ ಕಚೇರಿ ಮುಂಭಾಗ ಹೋರಾಟ

Bakery

Cake-Mane-bakery-in-Shankaraghatta.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment