ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOLEHONNURU, 8 SEPTEMBER 2024 : ಗಣಪತಿ ವಿಸರ್ಜನೆ ವೇಳೆ ಎರಡು ಗುಂಪಿನ ಮಧ್ಯೆ ಗಲಾಟೆಯಾಗಿದ್ದ ಅರಬಿಳಚಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ (Bandobast) ಮುಂದುವರೆದಿದೆ. ಇನ್ನು ಗಲಾಟೆ ಸಂಬಂಧ ತನಿಖೆ ಚುರುಕುಗೊಂಡಿದ್ದು ಹಲವರ ಬಂಧನವಾಗಿದೆ. ಕೆಲವರು ಮನೆ ತೊರೆದಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅರಬಿಳಚಿ ಗ್ರಾಮದಲ್ಲಿ ಶನಿವಾರ ಗಣಪತಿ ವಿಸರ್ಜನೆ ಮೆರವಣಿಗೆ ಸಂದರ್ಭ ಡೊಳ್ಳಿನ ತಂಡದ ವಿಚಾರವಾಗಿ ಎರಡು ಗಣಪತಿ ಸಂಘಟನೆಗಳ ಮಧ್ಯೆ ಗಲಾಟೆಯಾಗಿತ್ತು. ಈ ಹಿನ್ನೆಲೆ ಭಾನುವಾರವು ಗ್ರಾಮದಲ್ಲಿ ಬಂದೋಬಸ್ತ್ ಮುಂದುವರೆದಿದೆ. ಎರಡು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಹೊಳೆಹೊನ್ನೂರು ಠಾಣೆ ಪೊಲೀಸರು ಗಸ್ತು ನಡೆಸುತ್ತಿದ್ದಾರೆ.
ಹಲವರ ಬಂಧನ, ಕೆಲವು ನಾಪತ್ತೆ
ಘಟನೆ ಸಂಬಂಧ ಸುಮಾರು 30 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರ ವಿಚಾರಣೆ ನಡೆಸಲಾಗುತ್ತಿದೆ. ಇನ್ನು, ಬಂಧನ ಭೀತಿಯಿಂದ ಕೆಲವರು ಮನೆ ತೊರೆದಿದ್ದಾರೆ ಎಂದು ತಿಳಿದು ಬಂದಿದೆ.
ಅರಬಿಳಚಿ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿದ್ದ ಎರಡು ಸಂಘಟನೆಗಳು ಒಂದೇ ಡೊಳ್ಳು ತಂಡವನ್ನು ಗೊತ್ತು ಮಾಡಿದ್ದರು. ಒಟ್ಟಿಗೆ ಮೆರವಣಿಗೆ ಆರಂಭವಾಗಿದ್ದರಿಂದ ಡೊಳ್ಳಿನ ಸಮಸ್ಯೆಯಾಗಿ ಗಲಾಟೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಪೊಲೀಸ್ ಸೇರಿ ಆರು ಮಂದಿ ಗಾಯಗೊಂಡಿದ್ದರು. ಸದ್ಯ ಗ್ರಾಮದಲ್ಲಿ ಪರಿಸ್ಥಿತಿ ಶಾಂತವಾಗಿದೆ.
ಇದನ್ನೂ ಓದಿ » ರೈಲಲ್ಲಿ ಶಿವಮೊಗ್ಗಕ್ಕೆ ಬರುವವರಿಗೆ ಸ್ವಾಗತ ಕೋರುತ್ತಿದೆ ಮೃತ್ಯು ಕೂಪ, ರಕ್ತ ಹೀರಲು ಕಾಯುತ್ತಿದೆ ಚರಂಡಿ ಮುಚ್ಚಳ