ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
BHADRAVATHI NEWS, 9 NOVEMBER 2024 : ಭದ್ರಾವತಿ ತಾಲೂಕಿನ ಅಂತರಗಂಗೆ ಕೆ.ಎಚ್.ನಗರದ ನಿವಾಸಿ ದೇವೇಂದ್ರಪ್ಪ ಎಂಬುವವರ ಮೇಲೆ ಶುಕ್ರವಾರ ಕರಡಿ (Bear) ದಾಳಿ ನಡೆಸಿದೆ. ತೀವ್ರ ಗಾಯಗೊಂಡ ಇವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ದೇವೇಂದ್ರಪ್ಪ ಟೈಲರ್ ವೃತ್ತಿ ಮಾಡುತ್ತಿದ್ದು, ಶುಕ್ರವಾರ ಬಿಸಿಲುಮನೆ ಗ್ರಾಮದಲ್ಲಿರುವ ನಿವೇಶನ ನೋಡಿಕೊಂಡು ಮನೆಗೆ ಹಿಂದಿರುಗುವ ವೇಳೆ ದಾರಿಯಲ್ಲಿ ಎದುರಾದ ಕರಡಿ ದಾಳಿ ನಡೆಸಿದೆ. ದಾಳಿಯಿಂದ ತಪ್ಪಿಸಿಕೊಂಡು ಬಂದ ದೇವೇಂದ್ರಪ್ಪ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇದನ್ನೂ ಓದಿ » ಕಾರು, ಬೈಕ್ ಡಿಕ್ಕಿ, ಯುವಕ ದುರ್ಮರಣ, ಮಹಿಳೆ ಸ್ಥಿತಿ ಗಂಭೀರ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422