HOLEHONNURU, 25 AUGUST 2024 : ಕಳೆದ ಕೆಲವು ದಿನದಿಂದ ಆತಂಕ ಸೃಷ್ಟಿಸಿದ್ದ ಕರಡಿ (Bear) ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಟ್ಟೆಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕಳೆದ ರಾತ್ರಿ ಕರಡಿ ಸೆರೆ ಸಿಕ್ಕಿದೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಚೌಡಮ್ಮ ದೇವಸ್ಥಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್ ಇರಿಸಿದ್ದರು. ರಾತ್ರಿ 2.45ಕ್ಕೆ ದೇಗುಲದ ಬಳಿ ಬಂದ ಕರಡಿ ಬೋನಿಗೆ ಬಿದ್ದಿದೆ. ಈ ದೃಶ್ಯ ದೇಗುಲದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ವಿಷಯ ತಿಳಿದು ದೊಡ್ಡ ಸಂಖ್ಯೆ ಜನರು ದೇಗುಲದ ಬಳಿ ಜಮಾಯಿಸಿದ್ದರು.
![]() |
ಸುತ್ತಮುತ್ತಲ ಗ್ರಾಮದಲ್ಲಿ ಆತಂಕ ಮೂಡಿಸಿತ್ತು
ಕರಡಿ ಪ್ರತ್ಯಕ್ಷವಾಗಿದ್ದರಿಂದ ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಉಂಟಾಗಿತ್ತು. ಅಗಸನಹಳ್ಳಿ, ಎಮ್ಮೆಹಟ್ಟಿ, ಕೆರೆಬೀರನಹಳ್ಳಿ, ದಾಸರಕಲ್ಲಹಳ್ಳಿ, ತಿಮ್ಲಾಪುರ, ತಿಮ್ಲಾಪುರ ಕ್ಯಾಂಪ್, ಜಂಬರಘಟ್ಟೆ, ವಿಠಲಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕರಡಿ ಕಾಣಿಸುತ್ತಿತ್ತು. ಜಮೀನು ಕೆಲಸಕ್ಕೆ ತೆರಳಲು ರೈತರು, ಕಾರ್ಮಿಕರು ಹಿಂದೇಟು ಹಾಕುತ್ತಿದ್ದರು. ರಾತ್ರಿ ವೇಳೆ ಒಬ್ಬಂಟಿಯಾಗಿ ಓಡಾಡಲು ಹೆದರುತ್ತಿದ್ದರು.
ಇದನ್ನೂ ಓದಿ ⇒ MLA ಪುತ್ರನ ಹತ್ಯೆಗೆ ಸ್ಕೆಚ್, ಎಸ್ಪಿ ಮೊದಲ ರಿಯಾಕ್ಷನ್ – 3 ಫಟಾಫಟ್ ನ್ಯೂಸ್
ವ್ಯಕ್ತಿ ಮೇಲೆ ದಾಳಿ ನಡೆಸಿತ್ತು
ಎಮ್ಮೆಹಟ್ಟಿ ಗ್ರಾಮದ ಆನಂದಪ್ಪ ಎಂಬುವರ ಮೇಲೆ ಕೆಲ ದಿನಗಳ ಹಿಂದೆ ಕರಡಿ ದಾಳಿ ನಡೆಸಿತ್ತು. ಬೆಳಗ್ಗೆ ಬಹಿರ್ದೆಸೆಗೆ ತೆರಳಿದ್ದ ಸಂದರ್ಭ ಏಕಾಏಕಿ ದಾಳಿಗೆ ಆನಂದಪ್ಪ ಗಾಯಗೊಂಡಿದ್ದರು. ಅವರು ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದಿದ್ದರು. ದಾಳಿಯಿಂದಾಗಿ ಗ್ರಾಮಸ್ಥರಲ್ಲಿ ಆತಂಕ ಮತ್ತಷ್ಟು ಹೆಚ್ಚಾಗಿತ್ತು.
ಇದನ್ನೂ ಓದಿ ⇒ ಶಿವಮೊಗ್ಗ ನಗರದ ಸಮೀಪ ಆನೆ ದಾಳಿಗೆ ವ್ಯಕ್ತಿ ಬಲಿ
ಗ್ರಾಮಸ್ಥರ ಆತಂಕದ ನಡುವೆ ಮಾವಿನಕಟ್ಟೆ ವಲಯ ಅರಣ್ಯ ಅಧಿಕಾರಿಗಳು ಕರಡಿಯ ಚಲನವಲನ ಗಮನಿಸಿ ಬೋನ್ ಇರಿಸಿದ್ದರು. ಆರ್ಎಫ್ಒ ಜಗದೀಶ ಮಾರ್ಗದರ್ಶನದಲ್ಲಿ ಬೋನ್ ಇರಿಸಿದ್ದು, ಇವತ್ತು ಕರಡಿ ಸೆರೆಯಾಗಿದೆ. ಕರಡಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200