ಶಿವಮೊಗ್ಗ ಲೈವ್.ಕಾಂ | BHADRAVATHI NEWS | 14 ಆಗಸ್ಟ್ 2020
ಎಲ್ಲರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸುವುದಾದರೆ ಭದ್ರಾವತಿಯಲ್ಲಿ ಸರ್ಕಾರಿ ಆಸ್ಪತ್ರೆ ಯಾಕೆ ಬೇಕು. ಸರ್ಕಾರ ಇಷ್ಟೊಂದು ಹಣವನ್ನೇಕೆ ಖರ್ಚು ಮಾಡಬೇಕು. ಭದ್ರಾವತಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಹೀಗಂತ ಸದಸ್ಯ ಕುಮುರಿ ಧರ್ಮೇಗೌಡ ಪ್ರಶ್ನೆ ಮಾಡಿದ್ದಾರೆ.
ಭದ್ರಾವತಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞರಿದ್ದರು ಚಿಕಿತ್ಸೆಗಾಗಿ ಗರ್ಭಿಣಿಯರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಧರ್ಮೇಗೌಡ ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಇತರೆ ಸದಸ್ಯರು ಧ್ವನಿಗೂಡಿಸಿದರು. ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ಕುರಿತು ಪ್ರಶ್ನೆ ಮಾಡಿದರು.
ಉತ್ತರ ನೀಡಿದ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ಮಲ್ಲಪ್ಪ, ಅನಸ್ತೇಶಿಯಾ ವೈದ್ಯರು ಇರದಿದ್ದ ಕಾರಣಕ್ಕೆ ಗರ್ಭಿಣಿಯರನ್ನು ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಬೇರಾವುದೆ ಸಮಸ್ಯೆಯಿಲ್ಲ. ಮುಂದೆ ಹೀಗಾಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು.
ಅಂಗನವಾಡಿ ಕಟ್ಟಡ ನಿರ್ಮಾಣ
ಕೂಡ್ಲಿಗೆರೆ ಗ್ರಾಮದಲ್ಲಿ ಹೊಸ ಅಂಗನವಾಡಿ ಕಟ್ಟಡ, ಈ ಮಳೆಗಾಲದಲ್ಲಿ ಸೋರುತ್ತಿದೆ. ಕೂಡಲೆ ಸಮಸ್ಯೆ ಬಗೆಹರಿಸಬೇಕು ಎಂದು ಸದಸ್ಯೆ ಗೀತಾ ಜಗದೀಶ್ ಆಗ್ರಹಿಸಿದರು. ಇದೆ ವೇಳೆ ಸಿಡಿಪಿಒ ಅವರು ತಾಲೂಕಿನಲ್ಲಿ ಹೊಸ ಅಂಗನವಾಡಿ ನಿರ್ಮಾಣಕ್ಕೆ 16 ಲಕ್ಷ, ಶೌಚಾಲಯ ದುರಸ್ಥಿತಿಗೆ 12 ಲಕ್ಷ ಬಿಡುಗಡೆಯಾಗಿದೆ ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]