ಭದ್ರಾವತಿ: ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ (Bhadra Dam) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಾಗಿನ ಅರ್ಪಿಸಿ ರಾಜ್ಯ ಸರ್ಕಾರದ ₹ 2 ಕೋಟಿ ಅನುದಾನದಲ್ಲಿ ನಿರ್ಮಿಸಿದ ಪ್ರವಾಸಿ ಮಂದಿರವನ್ನು ಉದ್ಘಾಟಿಸಿದರು. ಬಳಿಕ ಜಲಸಂಪನ್ಮೂಲ ಇಲಾಖೆ ಮತ್ತು ರಾಜ್ಯ ನೀರಾವರಿ ನಿಗಮದ ಸಹಯೋಗದಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಿಸಿಎಂ ಏನೆಲ್ಲ ಹೇಳಿದರು?
ನಾಡಿನ ಜೀವನಾಡಿ ಭದ್ರಾ ಜಲಾಶಯ ಭರ್ತಿಯಾದರೆ ಮಾತ್ರ ರೈತರ ಜೀವನ ಸುಭದ್ರವಾಗಿರಲು ಸಾಧ್ಯ. ಅಚ್ಚುಕಟ್ಟು ರೈತರ ಹೃದಯ ಶ್ರೀಮಂತಿಕೆಯಿಂದ ಜಲಾಶಯ ತುಂಬಿದೆ. ಇಲ್ಲಿ ರೈತರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.
ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಂತೋಷದಿಂದ ಬಂದಿದ್ದೇನೆ. ಐದು ಜಿಲ್ಲೆಗಳಿಗೆ ಭದ್ರೆಯು ವಿಸ್ತರಿಸಿದ್ದಾಳೆ. ರೈತರು ಯಾವುದೇ ಸರ್ಕಾರಿ ಸಂಬಳ ಪಡೆಯುವುದಿಲ್ಲ. ಅವರ ಏಳಿಗೆಗೆ ಅನೇಕ ಯೋಜನೆಗಳನ್ನು ಸರ್ಕಾರ ರೂಪಿಸುತ್ತಿದೆ.

ಜಲಾಶಯದ ಅಚ್ಚುಕಟ್ಟು ವ್ಯಾಪ್ತಿಯ ನಾಲೆಗಳನ್ನು ದುರಸ್ಥಿಗೊಳಿಸುವಂತೆ ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರು ₹ 100 ಕೋಟಿ ಯೋಜನೆಯ ಪ್ರಸ್ತಾವ ಸಲ್ಲಿಸಿದ್ದಾರೆ. ಇದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
ಅವಕಾಶ ಸಿಕ್ಕಾಗ ಪುಣ್ಯದ ಕೆಲಸಗಳನ್ನು ಮಾಡಬೇಕು. ಇಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಶಾಸಕರು ಜನಪರ ಕಾರ್ಯಗಳನ್ನು ಮಾಡುತ್ತಿದ್ದಾರೆ. ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆ ಅಷ್ಟೇ ಮುಖ್ಯ. ಗ್ಯಾರಂಟಿ ಯೋಜನೆಗಳು ಜನರ ಬದುಕಿಗೆ ಆಸರೆಯಾಗಿವೆ. ರಾಜ್ಯದಲ್ಲಿ 2028ರಲ್ಲೂ ಕಾಂಗ್ರೆಸ್ ಆಡಳಿತಕ್ಕೆ ಬರಲಿದೆ. ಕಾಂಗ್ರೆಸ್ ಜನರ ನಂಬಿಕೆ ಉಳಿಸಿಕೊಳ್ಳುತ್ತದೆ’ ಎಂದರು.

ಜಲಾಶಯದ ಬಲದಂಡೆ ನಾಲೆಯಿಂದ ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 1,236 ಗ್ರಾಮಗಳಿಗೆ ಹಾಗೂ ಹೊಸದುರ್ಗ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸಲು ಜಲಜೀವನ್ ಮಿಷನ್ ಅಡಿ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಮತ್ತೊಮ್ಮೆ ಪರಿಶೀಲಿಸಬೇಕು.
- ಎಸ್.ಎಸ್.ಮಲ್ಲಿಕಾರ್ಜುನ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ
![]()

ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ, ತರೀಕೆರೆ ಶಾಸಕ ಬಿ.ಹೆಚ್.ಶ್ರೀನಿವಾಸ್, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ಹರಪನಹಳ್ಳಿ ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ್, ಗುಬ್ಬಿ ಶಾಸಕ ಶ್ರೀನಿವಾಸ, ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ ಅಮ್ಮಿನಭಾವಿ, ಜಿಲ್ಲಾಧಿಕಾರಿಗಳಾದ ಜಿ.ಎಂ.ಗಂಗಾಧರ ಸ್ವಾಮಿ, ಗುರುದತ್ತ ಹೆಗಡೆ, ಜಿಲ್ಲಾ ರಕ್ಷಣಾಧಿಕಾರಿ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?
