ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
BHADRAVATHI, 30 JULY 2024 : ಭದ್ರಾ ಜಲಾಶಯ (Bhadra Dam) ಗರಿಷ್ಠ ಮಟ್ಟಕ್ಕೆ ಭರ್ತಿಯಾಗಿದೆ. ಈ ಹಿನ್ನೆಲೆ ನಾಲ್ಕು ಕ್ರಸ್ಟ್ ಗೇಟ್ಗಳನ್ನು ಮೇಲೆತ್ತಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಳಗ್ಗೆ 9.30ಕ್ಕೆ ನಾಲ್ಕು ಕ್ರಸ್ಟ್ ಗೇಟ್ಗಳನ್ನು ಮೇಲೆತ್ತಲಾಯಿತು. ಹಾಲ್ನೊರೆಯಂತೆ ನೀರು ಹೊಳೆಗೆ ಹರಿಯಿತು. ಇದನ್ನು ಕಣ್ತುಂಬಿಕೊಳ್ಳಲು ವಿವಿಧೆಡೆಯ ಜನರು ಜಲಾಶಯದ ಮುಂದೆ ಆಗಮಿಸಿದ್ದರು. ಪ್ರತಿ ಗೇಟ್ ಮೇಲೆತ್ತಿದಾಗಲೂ ಜನರು ಶಿಳ್ಳೆ, ಚಪ್ಪಾಳೆ ಹೊಡೆದು ಸಂಭ್ರಮಿಸಿದರು.
ಎಷ್ಟಿದೆ ಒಳ ಮತ್ತು ಹೊರ ಹರಿವು?
ಇವತ್ತು ಭದ್ರಾ ಜಲಾಶಯಕ್ಕೆ 20,774 ಕ್ಯೂಸೆಕ್ ಒಳ ಹರಿವು ಇದೆ. ಈಗ 6 ಸಾವಿರ ಕ್ಯೂಸೆಕ್ ಹೊರ ಹರಿವು ಇದೆ. ಮಧ್ಯಾಹ್ನದ ವೇಳೆಗೆ ಹೊರ ಹರಿವು 30 ಸಾವಿರ ಕ್ಯೂಸೆಕ್ವರೆಗೆ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಜಲಾಶಯ ನೀರಿನ ಮಟ್ಟ 183.2 ಅಡಿ ಇದೆ.
ಇದನ್ನೂ ಓದಿ ⇓
ಗುಡ್ ಮಾರ್ನಿಂಗ್ ಶಿವಮೊಗ್ಗ | ಒಂದೇ ಕ್ಲಿಕ್ನಲ್ಲಿ ಇಡೀ ಜಿಲ್ಲೆಯ ಕಂಪ್ಲೀಟ್ ನ್ಯೂಸ್