ಭದ್ರಾ ಜಲಾಶಯದ ಒಳ ಹರಿವು ಎರಡು ಪಟ್ಟು ಹೆಚ್ಚಳ, ನೀರಿನ ಮಟ್ಟ ಒಂದು ಅಡಿ ಏರಿಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

ಭದ್ರಾವತಿ: ಜಲಾನಯನ ಪ್ರದೇಶದಲ್ಲಿ ಮಳೆ ತೀವ್ರಗೊಂಡ ಹಿನ್ನೆಲೆ ಭದ್ರಾ ಜಲಾಶಯಕ್ಕೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ದುಪ್ಪಟ್ಟು ಏರಿಕೆಯಾಗಿದೆ. ಸೋಮವಾರ ಬೆಳಿಗ್ಗೆ 4,135 ಕ್ಯೂಸೆಕ್ ಇದ್ದ ಒಳಹರಿವು, ಮಂಗಳವಾರ ಬೆಳಿಗ್ಗೆಯ ವೇಳೆಗೆ 8,117 ಕ್ಯೂಸೆಕ್‌ಗೆ ತಲುಪಿದೆ. ಪರಿಣಾಮವಾಗಿ ಜಲಾಶಯದ ನೀರಿನ ಮಟ್ಟ ಒಂದೇ ದಿನದಲ್ಲಿ ಒಂದು ಅಡಿಯಷ್ಟು ಹೆಚ್ಚಳವಾಗಿದೆ. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಗರಿಷ್ಠ 186 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಸೋಮವಾರ ನೀರಿನ ಮಟ್ಟ 139 ಅಡಿ 6 ಇಂಚು ದಾಖಲಾಗಿತ್ತು. ಒಳಹರಿವು ಗಣನೀಯವಾಗಿ ಹೆಚ್ಚಾಗಿರುವುದರಿಂದ ಮಂಗಳವಾರ ಬೆಳಿಗ್ಗೆ 6 ಗಂಟೆಯ ವರದಿಯಂತೆ ನೀರಿನ ಮಟ್ಟ 140 ಅಡಿ 6 ಇಂಚಿಗೆ ಏರಿಕೆಯಾಗಿದೆ. ಪ್ರಸ್ತುತ ಜಲಾಶಯದಲ್ಲಿ 27.231 ಟಿಎಂಸಿ ನೀರು ಸಂಗ್ರಹವಿದ್ದು, ಹೊರಹರಿವನ್ನು 212 ಕ್ಯೂಸೆಕ್‌ಗೆ ಸೀಮಿತಗೊಳಿಸಲಾಗಿದೆ. ಕಳೆದ ವರ್ಷ ಇದೇ ದಿನ ಜಲಾಶಯದ ನೀರಿನ ಮಟ್ಟ 170 ಅಡಿ 9 ಇಂಚು ಇತ್ತು.

Bhadra-dam-General-Image

ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕಾಗಿರುವುದರಿಂದ ಮುಂಬರುವ ದಿನಗಳಲ್ಲಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!