ಶಿವಮೊಗ್ಗ ಲೈವ್.ಕಾಂ | SHIMOGA JOBS NEWS | 20 ಸೆಪ್ಟಂಬರ್ 2020
ಭದ್ರಾ ಜಲಾಶಯದಿಂದ ನೀರಿನ ಹೊರ ಹರಿವು ಮತ್ತಷ್ಟು ಹೆಚ್ಚಳವಾಗಿದೆ. ಈಗ 55 ಸಾವಿರ ಕ್ಯೂಸೆಕ್ಗೂ ಹೆಚ್ಚು ನೀರು ಹೊರ ಬಿಡಲಾಗುತ್ತಿದೆ. ಇದರಿಂದ ಭದ್ರಾವತಿಯಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದೆ.
ಗಂಟೆ ಗಂಟೆಗೂ ಹೆಚ್ಚಾದ ಹೊರ ಹರಿವು
ಭದ್ರಾ ಜಲಾಶಯದಿಂದ ನೀರಿನ ಹೊರ ಹರಿವು ಗಂಟೆ ಗಂಟೆಗೂ ಹೆಚ್ಚಳವಾಗುತ್ತಿದೆ. ಈಗ 55 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಬೆಳಗ್ಗೆ ನೀರಿನ ಹೊರ ಹರಿವು 10 ಸಾವಿರ ಕ್ಯೂಸೆಕ್ ಇತ್ತು. ಅ ಬಳಿ ಪ್ರತಿ ಗಂಟೆಗೆ ಹತ್ತು ಸಾವಿರ ಕ್ಯೂಸೆಕ್ನಂತೆ ಹೊರ ಹರಿವು ಹೆಚ್ಚಳ ಮಾಡಲಾಗುತ್ತಿದೆ. ಈ ಸಂಬಂಧ ಭದ್ರಾ ಜಲಾಶಯದ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ಪ್ರಕಟಿಸಲಾಗುತ್ತಿದೆ.
ಭದ್ರಾವತಿಯಲ್ಲಿ ನೆರೆ ಭೀತಿ
ಜಲಾಶಯದಿಂದ ನೀರಿನ ಹೊರ ಹರಿವು ಹೆಚ್ಚಳವಾಗುತ್ತಿದ್ದಂತೆ ಭದ್ರಾವತಿಯಲ್ಲಿ ನೆರೆ ಭೀತಿ ಶುರುವಾಗಿದೆ. ನದಿ ಪಾತ್ರದಲ್ಲಿರುವ ಬಡಾವಣೆಗಳಿಗೆ ನೀರು ನುಗ್ಗುವ ಆತಂಕವಿದೆ. ಆದ್ದರಿಂದ ಭದ್ರಾವತಿ ನಗರಸಭೆ ವತಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ನಿರಾಶ್ರಿತರ ಪುನರ್ ವಸತಿ ಕೇಂದ್ರಗಳನ್ನು ಸ್ಥಾಪಿಸಲು ನಗರಸಭೆ ಯೋಜಿಸಿದೆ.
ಸೇತುವೆ ಮೇಲೆ ವಾಹನ ಸಂಚಾರ ಬಂದ್
ಹೊಳೆಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದ್ದು, ಭದ್ರಾವತಿಯ ಹೊಸ ಸೇತುವೆ ಮುಳುಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಹೊಸ ಸೇತುವೆ ಮೇಲೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಸೇತುವೆಯ ಎರಡು ಕಡೆ ಪೊಲೀಸರು ಬ್ಯಾರಿಕೇಡ್ ಹಾಕಿದ್ದು, ಹಳೆ ಸೇತುವೆ ಮೂಲಕ ಸಂಚರಿಸುವಂತೆ ಸೂಚಿಸುತ್ತಿದ್ದಾರೆ.
ಹೊಳೆ ನೋಡಲು ಜನವೋ ಜನ
ಹೊಳೆಯಲ್ಲಿ ನೀರಿನ ಪ್ರಮಾಣ ಹೆಚ್ಚಳ ಮತ್ತು ಸೇತುವೆ ಮೇಲೆ ವಾಹನ ಸಂಚಾರ ಬಂದ್ ವಿಚಾರ ತಿಳಿಯುತ್ತಿದ್ದಂತೆ ಹೊಳೆ ನೋಡಲು ಜನ ತಂಡೋಪ ತಂಡವಾಗಿ ಬರುತ್ತಿದ್ದಾರೆ. ಮೈ ದುಂಬಿ ಹರಿಯುತ್ತಿರುವ ಭದ್ರೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200