ಭದ್ರಾ ಜಲಾಶಯದ ನಾಲೆಗಳಿಗೆ ನೀರು ಹರಿಸುವ ವಿಚಾರ, ಶಾಸಕ ಸಂಗಮೇಶ್ವರ್‌ ಹೇಳಿಕೆ ಬಿಡುಗಡೆ, ಏನಂದ್ರು?

ಭದ್ರಾವತಿ: ನೀರಿನ ಅಭಾವದಿಂದ ಒಣಗುತ್ತಿರುವ ತೋಟಗಳನ್ನು ರಕ್ಷಿಸಲು ಭದ್ರಾ ಎಡದಂಡೆ ಹಾಗೂ ಬಲದಂಡೆ ನಾಲೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿದೆ. ಸೋಮವಾರ ಆದೇಶ ಪ್ರಕಟವಾಗಲಿದೆ ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ಭರವಸೆ ನೀಡಿದ್ದಾರೆ. (ಈ ಸುದ್ದಿಯನ್ನು ಇನ್ನು 40 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಸಂಗಮೇಶ್ವರ, ರೈತರ ಹಿತದೃಷ್ಟಿಯಿಂದ ತಾವು ದೀಪಾವಳಿ ಹಬ್ಬವನ್ನು ಬದಿಗಿಟ್ಟು ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವರಾದ ಚಲುವರಾಯಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ಮನವೊಲಿಸಿರುವುದಾಗಿ ಅವರು ಹೇಳಿದ್ದಾರೆ.

BK-Sangameshwara-Bhadravathi-MLA.

ಭಾನುವಾರ ಸರ್ಕಾರಿ ರಜೆ ಇರುವ ಕಾರಣ ಅಧಿಕೃತ ಆದೇಶ ಹೊರಡಿಸಲು ಸಾಧ್ಯವಾಗಿಲ್ಲ. ಸೋಮವಾರ ಬೆಳಿಗ್ಗೆ ಆದೇಶದ ಪ್ರತಿ ಹೊರಬೀಳಲಿದೆ. 10 ದಿನಗಳ ಕಾಲ ಎರಡೂ ನಾಲೆಗಳಿಗೆ ನೀರು ಹರಿಸುವ ಕಾರ್ಯ ಆರಂಭವಾಗಲಿದೆ ಎಂದರು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ರೈತರು ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿ ಕೊಡಬಾರದು ಹಾಗೂ ರಸ್ತೆಗಿಳಿದು ಪ್ರತಿಭಟನೆ ನಡೆಸಬಾರದು. ಸಚಿವರೊಂದಿಗೆ ಸಮಾಲೋಚನೆ ನಡೆಸಿ ನೀರು ಹರಿಸಲಾಗುತ್ತಿದ್ದು, ರೈತರು ಸಹಕಾರ ನೀಡಬೇಕು ಎಂದು ಸಂಗಮೇಶ್ವರ್ ಮನವಿ ಮಾಡಿದ್ದಾರೆ.