SHIVAMOGGA LIVE NEWS | 21 FEBRURARY 2023
BHADRAVATHI : ವಿಐಎಸ್ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ವಿವಿಧ ಸಂಘಟನೆಗಳು, ನಾಗರಿಕರ ಬೆಂಬಲದೊಂದಿಗೆ ಭದ್ರಾವತಿ ಸ್ವಯಂ ಪ್ರೇರಿತ ಬಂದ್ (bandh) ಮಾಡಲು ಕಾರ್ಮಿಕರು ನಿರ್ಧರಿಸಿದ್ದಾರೆ. ಫೆ.24ರಂದು ಭದ್ರಾವತಿ ಬಂದ್ ಗೆ ಕರೆ ನೀಡಲಾಗಿದೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಕಾರ್ಮಿಕರಿಂದ ವಿಐಎಸ್ಎಲ್ ಕಾರ್ಖಾನೆ ಅಪ್ಪಿಕೋ ಚಳವಳಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಫೆ.24ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಪಟ್ಟಣದಲ್ಲಿ ಬಂದ್ (bandh) ಮಾಡಲು ತೀರ್ಮಾನಿಸಲಾಗಿದೆ. ಆ ದಿನ ಬೆಳಗ್ಗೆ 9 ಗಂಟೆಯಿಂದ ಮೆರವಣಿಗೆ ನಡೆಸಲಾಗುತ್ತದೆ. ವಿಐಎಸ್ಎಲ್ ಮುಂಭಾಗದಿಂದ ಡಾ. ಅಂಬೇಡ್ಕರ್ ವೃತ್ತ, ಬಿ.ಹೆಚ್.ರಸ್ತೆ, ಚನ್ನಗಿರಿ ರಸ್ತೆ ಮೂಲಕ ತಹಶೀಲ್ದಾರ್ ಕಚೇರಿ ತಲುಪಲಾಗುತ್ತದೆ ಎಂದು ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಹೆಚ್.ಜಿ.ಸುರೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿ – ‘ವಿಐಎಸ್ಎಲ್ ಬಂದ್ ಆಗಲು ಬಿಜೆಪಿ ಸರ್ಕಾರವೇ ಕಾರಣ’, ಶಿವಮೊಗ್ಗದಲ್ಲಿ ಆಕ್ರೋಶ
ವಿಐಎಸ್ಎಲ್ ಪುನಶ್ಚೇತನಕ್ಕಾಗಿ ಕಾರ್ಮಿಕರು ಕಳೆದ 33 ದಿನದಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಿಂದ ಬೈಕ್ ಜಾಥಾ, ಶಿವಮೊಗ್ಗದ ಪ್ರಮುಖ ವೃತ್ತಗಳಲ್ಲಿ ರಸ್ತೆ ತಡೆ, ಕಾರ್ಮಿಕರ ಆಕ್ರೋಶ