SHIVAMOGGA LIVE NEWS | 24 FEBRURARY 2023
BHADRAVATHI : ವಿಐಎಸ್ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಹಿಂಪಡೆಯಬೇಕು ಎಂದು ಆಗ್ರಹಿಸಿ ಇವತ್ತು ಭದ್ರಾವತಿ ಬಂದ್ ಗೆ (Bandh) ಕರೆ ನೀಡಲಾಗಿದೆ. ವಿಐಎಸ್ಎಲ್ ಕಾರ್ಮಿಕರು ರಸ್ತೆಗಿಳಿದಿದ್ದು, ಅಂಗಡಿಗಳನ್ನು ಬಂದ್ ಮಾಡುವಂತೆ ಜನರಲ್ಲಿ ಮನವಿ ಮಾಡುತ್ತಿದ್ದಾರೆ. ಇನ್ನು, ಬಸ್ ನಿಲ್ದಾಣದ ಮುಂಭಾಗ ಸರ್ಕಲ್ ನಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹೇಗಿದೆ ಬಂದ್ ವಾತಾವರಣ?
ಭದ್ರಾವತಿಯಲ್ಲಿ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್ (Bandh) ಮಾಡಲು ನಿರ್ಧರಿಸಲಾಗಿದೆ. ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ತೀರ್ಮಾನಿಸಲಾಗಿದೆ. ಆದರೆ ಬೆಳಗ್ಗೆ ಹಾಲು, ದಿನಸಿ ಸೇರಿ ಅಗತ್ಯ ವಸ್ತು ಖರೀದಿಗೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿತ್ತು. ಈಗ ವಿಐಎಸ್ಎಲ್ ಕಾರ್ಮಿಕರು, ವಿವಿಧ ಸಂಘಟನೆಗಳ ಪ್ರಮುಖರು ಬೈಕ್ ಗಳಲ್ಲಿ ವಿವಿಧ ಬಡಾವಣೆಗೆ ತೆರಳಿ ಬಂದ್ ಗೆ ಸಹಕರಿಸುವಂತೆ ಮನವಿ ಮಾಡುತ್ತಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ
ಅಂಬೇಡ್ಕರ್ ವೃತ್ತದಲ್ಲಿ ಡಾ. ಅಂಬೇಡರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಸರ್ಕಲ್ ಬಳಿ ಬಂದ ಕಾರ್ಮಿಕರು ನಡು ರಸ್ತೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ವಿಐಎಸ್ಎಲ್ ಪರವಾಗಿ ಘೋಷಣೆ ಕೂಗಿದರು.
ಇದನ್ನೂ ಓದಿ – ಭದ್ರಾವತಿಯಲ್ಲಿ ವಿವಿಧ ಶಾಲೆಗಳ ಸಾವಿರಾರು ವಿದ್ಯಾರ್ಥಿಗಳಿಂದ ಮೆರವಣಿಗೆ, ಘೋಷಣೆ, ಕಾರಣವೇನು?
ವಿವಿಧ ಸಂಘಟನೆಗಳ ಬೆಂಬಲ
ವಿಐಎಸ್ಎಲ್ ಪುನಶ್ಚೇತನಕ್ಕೆ ಆಗ್ರಹಿಸಿ ಇವತ್ತು ಕರೆ ನೀಡಿರುವ ಬಂದ್ ಗೆ ವಿವಿಧ ಸಂಘಟನೆಳು ಬೆಂಬಲ ಸೂಚಿಸಿವೆ. ವರ್ತಕರು, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಿಗಳು, ವಿವಿಧ ಸಮುದಾಯದ ಮುಖಂಡರು ಸೇರಿ 26ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಬೆಳಗ್ಗೆ ಡಾ.ಅಂಬೇಡ್ಕರ್ ಪ್ರತಿಮೆ ಮಾಲಾರ್ಪಣೆ ಮಾಡಿ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ವಿವಿಧ ಬಡಾವಣೆಯಲ್ಲಿ ಮೆರವಣಿಗೆ ನಡೆಸಿ ಬಳಿಕ ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಲು ಯೋಜಿಸಲಾಗಿದೆ.
ಬಂದ್ ಕರೆ ಹಿನ್ನೆಲೆ ಭದ್ರಾವತಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.