ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 1 MARCH 2021
ಕಾರ್ಯಕರ್ತರ ಮೇಲಿನ ಹಲ್ಲೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಭದ್ರಾವತಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಶಾಸಕ ಸಂಗಮೇಶ್ವರ್ ಮತ್ತು ಅವರ ಬೆಂಬಲಿಗರ ವಿರುದ್ಧ ಘೋಷಣೆ ಕೂಗಲಾಯಿತು. ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ಇದನ್ನೂ ಓದಿ | ಭದ್ರಾವತಿಯಲ್ಲಿ ಕಬಡ್ಡಿ ಫೈನಲ್ ಪಂದ್ಯಾವಳಿ ವೇಳೆ ಕಿರಿಕ್, ಸಂಭ್ರಮಾಚರಣೆ ವೇಳೆ ಫೈಟ್, ಜಗಳಕ್ಕೇನು ಕಾರಣ?
ಭದ್ರಾವತಿಯ ಬಸವೇಶ್ವರ ಸರ್ಕಲ್‍ನಲ್ಲಿರುವ ತಾಲೂಕು ಬಿಜೆಪಿ ಕಚೇರಿಯಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಬಳಿಕ ತಾಲೂಕು ಕಚೇರಿ ಮುಂದೆ ಧರಣಿ ನಡೆಸಲಾಯಿತು.
ಶಾಸಕ ಸಂಗಮೇಶ್ವರ ಅವರ ಕುಟುಂಬದವರು ಮತ್ತು ಬೆಂಬಲಿಗರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಕೂಡಲೆ ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ‍್ಯಕ್ಷ ಟಿ.ಡಿ.ಮೇಘರಾಜ್, ಸಣ್ಣ ಕೈಗಾರಿಕಾ ನಿಗಮ ಉಪಾಧ್ಯಕ್ಷ ಎಸ್.ದತ್ತಾತ್ರಿ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್, ರೈಲ್ವೆ ಸಲಹಾ ಸಮಿತಿ ಸದಸ್ಯ ಮಾಲತೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಇಲ್ಲಿದೆ ವಿಡಿಯೋ ರಿಪೋರ್ಟ್
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






