ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಜಾತಿ ನಿಂದನೆ ಮಾಡಿ, ಜೀವ ಬೆದರಿಕೆ ಹಾಕಿದ್ದ ಪ್ರಕರಣದ ಆರು ಮಂದಿ ಆರೋಪಿಗಳಿಗೆ ಭದ್ರಾವತಿಯ ನ್ಯಾಯಾಲಯವು (court) ತಲಾ ಎರಡು ವರ್ಷಗಳ ಕಠಿಣ ಕಾರಾವಾಸ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

2020ರಜುಲೈ 28 ರಂದು ಲಕ್ಷ್ಮೀಪುರ ಗ್ರಾಮದ ಜಮೀನಿನಲ್ಲಿ ವ್ಯಕ್ತಿಯೊಬ್ಬರು ಕೆಲಸ ಮಾಡುತ್ತಿದ್ದಾಗ, ಗೌತಮಿ (30), ನಾಗರಾಜ (56), ರಾಘವೇಂದ್ರ (35), ನಾಗರತ್ನ (54), ಲಕ್ಷ್ಮಮ್ಮ (40) ಹಾಗೂ ದೇವರಾಜ (28) ಎಂಬುವವರು ಬಂದು ಜಾತಿ ನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದಿದ್ದರು. ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು.

ಈ ಕುರಿತು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಅಂದಿನ ಡಿವೈಎಸ್ಪಿ ಸುಧಾಕರ್ ಎಸ್. ನಾಯ್ಕ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

Bhadravathi News Graphics
knief assault

ವಿಚಾರಣೆ ನಡೆಸಿದ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಆರೋಪಿಗಳ ಮೇಲಿನ ಸಾಕ್ಷ್ಯಾಧಾರಗಳು ದೃಢಪಟ್ಟಿವೆ. ಈ ಹಿನ್ನೆಲೆ ನ್ಯಾ.ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ತೀರ್ಪು ಪ್ರಕಟಿಸಿದ್ದಾರೆ. ಆರು ಆರೋಪಿಗಳಿಗೆ ತಲಾ 2 ವರ್ಷ ಕಠಿಣ ಕಾರಾವಾಸ ಶಿಕ್ಷೆ ವಿಧಿಸಲಾಗಿದೆ. ಒಟ್ಟು 1,74,000/- ರೂಪಾಯಿ ದಂಡ ವಿಧಿಸಿ ಆದೇಶಿಸಲಾಗಿದೆ.

ಇದನ್ನೂ ಓದಿ – ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ.ಪಿ ಅವರು ವಾದ ಮಂಡಿಸಿದ್ದರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 20, 2026

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ವಿದ್ಯುತ್‌ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?‌

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

ತ್ಯಾವರೆಕೊಪ್ಪ ಮೃಗಾಲಯದಲ್ಲಿ ವೈದ್ಯೆ ಸಾವು, ಮಿನಿಸ್ಟರ್‌ ಗರಂ, ಖಡಕ್‌ ಸೂಚನೆ, ಏನದು?

Leave a Comment