ಶಿವಮೊಗ್ಗ ಲೈವ್.ಕಾಂ | BHADRAVATHI NEWS | 19 ಸೆಪ್ಟೆಂಬರ್ 2021
ಭದ್ರಾವತಿಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಅದ್ಧೂರಿಯಾಗಿ ನೆರವೇರಿತು. ಸಾವಿರಾರು ಜನರ ಸಮ್ಮುಖದಲ್ಲಿ ಮೆರವಣಿಗೆ ನಡೆಸಿ ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.
ಹೊಸಮನೆ ಬಡಾವಣೆಯಲ್ಲಿ ಹಿಂದೂ ಮಹಾಸಭಾ ಗಣಪತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಸಂಜೆ 5 ಗಂಟೆಗೆ ಅಲಂಕೃತಗೊಂಡ ವಾಹನದಲ್ಲಿ ಗಣೇಶ ಮೂರ್ತಿ ಮೆರವಣಿಗೆ ನಡೆಸಲಾಯಿತು. ರಂಗಪ್ಪ ಸರ್ಕಲ್’ನಿಂದ ಮಾಧವಾಚಾರ್ ಸರ್ಕಲ್ ವರೆಗೆ ಮೆರವಣಿಗೆ ನಡೆಸಲಾಯಿತು. ಬಳಿಕ ತರೀಕೆರೆ ರಸ್ತೆ ಬಳಿ ಭದ್ರಾ ನದಿಯಲ್ಲಿ ವಿಸರ್ಜಿಸಲಾಯಿತು.
ಮೆರವಣಿಗೆಯಲ್ಲಿ ಜನವೋ ಜನ
ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಮಹಿಳೆಯರು, ಮಕ್ಕಳು, ಯುವಕರು ಮೆರವಣಿಗೆಯಲ್ಲಿದ್ದರು. ಭಗವಾಧ್ವಜಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತ ಮೆರವಣಿಗೆಯಲ್ಲಿ ಭಾಗವಹಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್
ದೊಡ್ಡ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಹೆಚ್ಚುವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಡಿವೈಎಸ್’ಪಿ ಸಾಹಿಲ್ ಬಾಗ್ಲ ಅವರು ಬಂದೋಬಸ್ತ್ ನೇತೃತ್ವ ವಹಿಸಿದ್ದರು.
ಹಿಂದೂ ಮಹಾಸಭಾ ಸಮಿತಿ ಅಧ್ಯಕ್ಷ ವಿ.ಕದಿರೇಶ್, ಮಂಗೋಟೆ ರುದ್ರೇಶ್, ಆನಂದಕುಮಾರ್, ಎಂ.ಪ್ರಭಾಕರ್, ಮಂಜುನಾಥ್ ಕದಿರೇಶ್, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಬಿ.ಕೆ.ಮೋಹನ್, ಗಣೇಶ್, ಚನ್ನಪ್ಪ, ರಾಮಮೂರ್ತಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಪಕ್ಷಗಳ ಪ್ರಮುಖರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200