ಭದ್ರಾವತಿ: ಕಂಚಿನ ಬಾಗಿಲು ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ (Temple) 10ನೇ ವರ್ಷದ ಮಹಾರಥೋತ್ಸವ ವಿಜೃಂಭಣೆಯಿಂದ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡು ರಥೋತ್ಸವ ಕಣ್ತುಂಬಿಕೊಂಡರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್ ಟು ಸ್ಕೂಲ್ ಆಫರ್, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?
ಸೋಮವಾರ ದೇವಸ್ಥಾನದ ಪ್ರಾಂಗಣದಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಲಕ್ಷ್ಮಿನರಸಿಂಹ ದೇವಸ್ಥಾನಕ್ಕೆ ತೆರಳಿ ಪುನಃ ಹಿಂತಿರುಗಿ ದೇವಸ್ಥಾನದ ಮುಂಭಾಗದಲ್ಲಿ ಅಲಂಕೃತಗೊಂಡ ರಥದಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ಮಧ್ಯಾಹ್ನ 1.30ರ ಸಮಯದಲ್ಲಿ ತಾಲೂಕು ಕಚೇರಿ ಸಮೀಪ ಇರುವ ದೇವಸ್ಥಾನ ಮುಂಭಾಗದಲ್ಲಿ ಮಹಾರಥೋತ್ಸವ ಆರಂಭಗೊಂಡು ರಂಗಪ್ಪ ವೃತ್ತ ಹಾಗೂ ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ರಥೋತ್ಸವ ಆರಂಭಗೊಳ್ಳುತ್ತಿದ್ದಂತೆ ಭಕ್ತರು ಜೈಕಾರ ಹಾಕಿದರು. ಚಂಡೆ ವಾದ್ಯ ತಂಡ ಗಮನ ಸೆಳೆಯಿತು. ಭಜನಾ ಮಂಡಳಿಯಿಂದ ಭಜನೆ ನಡೆಯಿತು.
ರಥೋತ್ಸವದ ಅಂಗವಾಗಿ ಬೆಳಿಗ್ಗೆ ನವಗ್ರಹ ಹೋಮ, ಆದಿವಾಸ ಹೋಮ, ರಥಶುದ್ಧಿ ಹೋಮ, ರತಾಧಿವಾಸ ಹೋಮ, ರಥಾರೋಹಣ ಸೇರಿ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ದೇವಸ್ಥಾನದ ಪ್ರಧಾನ ಅರ್ಚಕ ಪವನ್ ಕುಮಾರ್ ಉಡುಪ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ನಡೆದವು. ಶಾಸಕ ಬಿ.ಕೆ. ಸಂಗಮೇಶ್ವರ, ತಹಶೀಲ್ದಾರ್ ಪರುಸಪ್ಪ ಕುರುಬರ, ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಕೆ.ನರಸಿಂಹಮೂರ್ತಿ, ಉಪಾಧ್ಯಕ್ಷ ಬಿ. ಅಪ್ಪಾಜಿಗೌಡ, ಪ್ರಧಾನ ಕಾರ್ಯದರ್ಶಿ ಎಸ್.ಎನ್. ರಾಜಶೇಖರ್, ಕಾರ್ಯದರ್ಶಿ ಎ.ಎಸ್. ಆಶಾ ಪುಟ್ಟಸ್ವಾಮಿ, ಖಜಾಂಚಿ ಎಸ್.ಬಿ. ದುಗ್ಗೇಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ.ಟಿ.ನಾಗರಾಜ್, ಬಿ.ಎನ್. ಜಯರಾಂ, ರತ್ನಮ್ಮ, ಸುಭಾಷ್, ಎನ್. ಜವರೇಗೌಡ, ವೀಣಾ, ಶ್ರೀನಿವಾಸ್ ಮತ್ತು ಎಸ್.ಎಸ್. ಪ್ರಸನ್ನ ಕುಮಾರ್ ಪಾಲ್ಗೊಂಡಿದ್ದರು.
ಇದನ್ನೂ ಓದಿ » ಶಿವಮೊಗ್ಗದ ಹವಾಮಾನ | 20 ಮೇ 2025 | ಇವತ್ತು ಎಷ್ಟಿರುತ್ತೆ ತಾಪಮಾನ? ಎಲ್ಲೆಲ್ಲಿ ಮಳೆಯಾಗಲಿದೆ?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200