ಶಿವಮೊಗ್ಗ: ಟೆಲಿಗ್ರಾಂ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ. ಭದ್ರಾವತಿಯ (Bhadravathi)ವ್ಯಕ್ತಿಯೊಬ್ಬರು ಟೆಲಿಗ್ರಾಂನಲ್ಲಿ ಜಾಹೀರಾತು ನೋಡಿ ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಿದ್ದಾರೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಹೇಗಾಯ್ತು ಮೋಸ?
ಟೆಲಿಗ್ರಾಂನಲ್ಲಿ ಲಿಂಕ್ ಕ್ಲಿಕ್ ಮಾಡಿದಾಗ, ಮಧುಮಿತಾ ಎಂಬ ಹೆಸರಿನ ಗ್ರೂಪ್ ಅಡ್ಮಿನ್ ಇವರನ್ನು ಸಂಪರ್ಕಿಸಿದ್ದಾರೆ. ತಾವು ಟಾಟಾ ಕಂಪನಿಯ ಪ್ರತಿನಿಧಿಗಳು ಎಂದು ತಿಳಿಸಿದ್ದಾರೆ. ಫ್ಯಾಷನ್ ಡಿಸೈನಿಂಗ್ ಉತ್ಪನ್ನಗಳನ್ನು ಖರೀದಿಸಿ ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿದ್ದಾರೆ.
ಇದನ್ನು ನಂಬಿದ ಭದ್ರಾವತಿಯ ವ್ಯಕ್ತಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದಾರೆ. ಡಿಸೆಂಬರ್ 18 ರಿಂದ ಡಿಸೆಂಬರ್ 25 ರ ಅವಧಿಯಲ್ಲಿ ಒಟ್ಟು ₹6,23,155 ವರ್ಗಾಯಿಸಿದ್ದಾರೆ. ತಾವು ಹೂಡಿಕೆ ಮಾಡಿದ ಹಣ ಮತ್ತು ಲಾಭ ವಾಪಸ್ ಬಾರದೇ ಇದ್ದಾಗ ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ (CEN) ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಇದನ್ನೂ ಓದಿ » ಉದ್ಯಮಿಗಳೇ ಹುಷಾರ್, ಶಿವಮೊಗ್ಗ ಜಿಲ್ಲೆಯ ಡಾಂಬಾರು ವ್ಯಾಪಾರಿಗೆ ಲಕ್ಷ ಲಕ್ಷ ಮೋಸ, ಆಗಿದ್ದೇನು?
LATEST NEWS
- ವಿದ್ಯಾನಗರ ಸೇತುವೆ ನಾಮಕರಣ ವಿಚಾರ, ಮುಖ್ಯಮಂತ್ರಿಗೆ ಪತ್ರ ಬರೆದ ಮಾಜಿ ಮಿನಿಸ್ಟರ್

- ಹೊಸನಗರದಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ ಲಾರಿಗಳು ಪೊಲೀಸ್ ವಶಕ್ಕೆ, ಕಾರಣವೇನು?

- ಎಂಪಿಎಂ ನಿವೃತ್ತ ಕಾರ್ಮಿಕ ನೇಣು ಬಿಗಿದು ಆತ್ಮಹತ್ಯೆ

- ಶಿವಮೊಗ್ಗದ ಹಲವೆಡೆ ಜನವರಿ 21ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದ ಲಾಡ್ಜ್ಗಳಲ್ಲಿ ಪೊಲೀಸರಿಂದ ದಿಢೀರ್ ತಪಾಸಣೆ, ಏನೆಲ್ಲ ಪರಿಶೀಲಿಸಿದರು?

About The Editor
ನಿತಿನ್ ಆರ್.ಕೈದೊಟ್ಲು






