ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಭದ್ರಾವತಿ: ಎದುರು ಮನೆಗೆ ನುಗ್ಗಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿಗೆ ಭದ್ರಾವತಿಯ ನ್ಯಾಯಾಲಯವು ಜೈಲು ಶಿಕ್ಷೆ (prison) ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

Shivamogga-Live-Number-1-Website

2021ರ ಅಕ್ಟೋಬರ್ 3 ರಂದು ಭದ್ರಾವತಿಯ ಹಳೇನಗರದ ನೇತಾಜಿ ರಸ್ತೆ 1ನೇ ಕ್ರಾಸ್ ನಿವಾಸಿ ಅಹ್ಮದ್ ಷರೀಫ್ (34) ತನ್ನ ಎದುರು ಮನೆಯ ನಿವಾಸಿ ಮಹಮ್ಮದ್‌ ಸಾಬ್‌ ರವರ ಮನೆಗೆ ನುಗ್ಗಿದ್ದ. ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದ. ಈ ಕುರಿತು ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹಳೇನಗರ ಪಿಎಸ್‌ಐ ಈರೇಶ್‌ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಅಪರಾಧ ದೃಢಪಟ್ಟಿದೆ. ಈ ಹಿನ್ನೆಲೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ : ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಅಹ್ಮದ್ ಷರೀಫ್‌ಗೆ 1 ವರ್ಷ ಸಾಧಾರಣ ಕಾರಾವಾಸ ಶಿಕ್ಷೆ, ₹2,000 ದಂಡ ವಿಧಿಸಿ ಆದೇಶ ನೀಡಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 7, 2026

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಸಕೆಂಡ್‌ ಹ್ಯಾಂಡ್‌ ಕಾರು ಖರೀದಿ ತಂದ ಫಜೀತಿ, ಶಿವಮೊಗ್ಗದಲ್ಲಿ ದಾಖಲಾಯ್ತು ಕೇಸ್‌? ಆಗಿದ್ದೇನು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗದ JNN ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಬೂಟ್‌ ಕ್ಯಾಂಪ್‌, ಏನಿದು?

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಶಿವಮೊಗ್ಗ, ಶಿಕಾರಿಪುರ, ಸಾಗರದ ಐದು ಕಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಹೊಸನಗರ ಕ್ಷೇತ್ರ ಮರು ರಚನೆ, ಪಾದಯಾತ್ರೆ ಸಮಾರೋಪ, ಸಚಿವ, ಸಂಸದರು ಏನಂದ್ರು?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಎದುರು ಮನೆಗೆ ನುಗ್ಗಿದ್ದ ಭದ್ರಾವತಿ ವ್ಯಕ್ತಿಗೆ ಜೈಲು, ದಂಡ, ಎಷ್ಟು ವರ್ಷ ಶಿಕ್ಷೆ?

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಭದ್ರಾವತಿ ತಾಲೂಕಿನ ಹಲವು ಕಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗ KSRTC ನಿಲ್ದಾಣದಲ್ಲಿ ಭದ್ರಾವತಿ ಮಹಿಳೆಯ ಭಾರಿ ಮೊತ್ತದ ಚಿನ್ನಾಭರಣ ಕಳ್ಳತನ

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ನೆತ್ತಿ ಸುಡುತ್ತಿದೆ ಬಿಸಿಲು, ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಧಗಧಗ ಹೊತ್ತಿ ಉರಿದ ಡಸ್ಟರ್‌ ಕಾರು, ತಪ್ಪಿದ ಅನಾಹುತ, ಆಗಿದ್ದೇನು?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಪಂಚಮಿ, ಜ್ಯೇಷ್ಠ ನಕ್ಷತ್ರದ ದಿನ, ಶು ಸಮಯ ಯಾವಾಗಿದೆ?

Leave a Comment