ಭದ್ರಾವತಿ: ಎದುರು ಮನೆಗೆ ನುಗ್ಗಿ ವ್ಯಕ್ತಿ ಮೇಲೆ ಹಲ್ಲೆ ನಡೆಸಿ, ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದ ಆರೋಪಿಗೆ ಭದ್ರಾವತಿಯ ನ್ಯಾಯಾಲಯವು ಜೈಲು ಶಿಕ್ಷೆ (prison) ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2021ರ ಅಕ್ಟೋಬರ್ 3 ರಂದು ಭದ್ರಾವತಿಯ ಹಳೇನಗರದ ನೇತಾಜಿ ರಸ್ತೆ 1ನೇ ಕ್ರಾಸ್ ನಿವಾಸಿ ಅಹ್ಮದ್ ಷರೀಫ್ (34) ತನ್ನ ಎದುರು ಮನೆಯ ನಿವಾಸಿ ಮಹಮ್ಮದ್ ಸಾಬ್ ರವರ ಮನೆಗೆ ನುಗ್ಗಿದ್ದ. ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಜೀವ ಬೆದರಿಕೆ ಒಡ್ಡಿದ್ದ. ಈ ಕುರಿತು ಹಳೇನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಳೇನಗರ ಪಿಎಸ್ಐ ಈರೇಶ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಅಪರಾಧ ದೃಢಪಟ್ಟಿದೆ. ಈ ಹಿನ್ನೆಲೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ.
ಅಹ್ಮದ್ ಷರೀಫ್ಗೆ 1 ವರ್ಷ ಸಾಧಾರಣ ಕಾರಾವಾಸ ಶಿಕ್ಷೆ, ₹2,000 ದಂಡ ವಿಧಿಸಿ ಆದೇಶ ನೀಡಲಾಗಿದೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ರತ್ನಮ್ಮ ಪಿ. ಅವರು ವಾದ ಮಂಡಿಸಿದ್ದರು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ