ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 2 ಫೆಬ್ರವರಿ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ರಸ್ತೆ ಮಧ್ಯೆ ಅಸ್ವಸ್ಥರಾಗಿ ಕುಸಿದು ಕೂತಿದ್ದ ದಂಪತಿಯನ್ನು ಭದ್ರಾವತಿ ಶಾಸಕ ಸಂಗಮೇಶ್ವರ್ ಅವರು ತಮ್ಮ ಕಾರಿನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶಾಸಕರ ಈ ಕಾರ್ಯದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅರಳಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುದ್ದಲಿ ಪೂಜೆ ಕಾರ್ಯಕ್ರಮ ಮುಗಿಸಿ, ಶಾಸಕ ಸಂಗಮೇಶ್ವರ್ ಅವರು ಭದ್ರಾವತಿಗೆ ಹಿಂತಿರುಗುತ್ತಿದ್ದರು. ರಸ್ತೆ ಮಧ್ಯೆ ವೃದ್ಧ ದಂಪತಿ ಅಸ್ವಸ್ಥರಾಗಿ ಕೂತಿದ್ದರು. ಇದನ್ನು ಗಮನಿಸಿದ ಶಾಸಕ ಸಂಗಮೇಶ್ವರ್ ಅವರು ಆರೋಗ್ಯ ವಿಚಾರಿಸಿ, ನೆರವು ನೀಡಿದ್ದಾರೆ.
ತಮ್ಮ ಕಾರಿನಲ್ಲಿ ವೃದ್ಧ ದಂಪತಿಯನ್ನು ಭದ್ರಾವತಿಗೆ ಕರೆತಂದಿದ್ದಾರೆ. ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ.
ರೆಡ್ಡಿ ಕ್ಯಾಂಪ್ ನಿವಾಸಿಗಳಾದ ಯತಿರಾಜ್ ನಾಯ್ಡು ಮತ್ತು ವಿಜಯಮ್ಮ ಎಂದು ತಿಳಿದು ಬಂದಿದೆ. ಶಾಸಕ ಸಂಗಮೇಶ್ವರ್ ಅವರು ವೃದ್ಧ ದಂಪತಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Namma Bhadravathi | About Shivamogga Live