ರಸ್ತೆ ಅಪಘಾತ, ಶಾಸಕ ಸಂಗಮೇಶ್ವರ್‌ ಆಪ್ತ ಸಹಾಯಕ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 26 DECEMBER 2023

BHADRAVATHI : ರಸ್ತೆ ಅಪಘಾತದಲ್ಲಿ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರ ಆಪ್ತ ಸಹಾಯಕ ಈಶ್ವರ್‌ (47) ಸಾವನಪ್ಪಿದ್ದಾರೆ. ಭದ್ರಾವತಿ ತಾಲೂಕು ಚನ್ನಗಿರಿ ರಸ್ತೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.

ಕೂಡ್ಲಿಗೆರೆಯಿಂದ ಈಶ್ವರ್‌ ಭದ್ರಾವತಿಗೆ ತಮ್ಮ ಬೈಕ್‌ನಲ್ಲಿ ಬರುತ್ತಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದು ಅವರು ಗಂಭೀರ ಗಾಯಗೊಂಡಿದ್ದರು ಎಂದು ತಿಳಿದು ಬಂದಿದೆ. ಕೂಡಲೆ ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಎಂಎಲ್‌ಎ ಸಂತಾಪ

ಇನ್ನು, ತಮ್ಮ ಆಪ್ತ ಸಹಾಯಕ ಈ‍ಶ್ವರ್‌ ನಿಧನಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ್‌ ಸಂತಾಪ ಸೂಚಿಸಿದ್ದಾರೆ. ‘ನನ್ನ ಆಪ್ತ ಸಹಾಯಕ ಹಾಗೂ ನನಗೆ ಶಕ್ತಿಯಾಗಿ ನನ್ನ ಬೆನ್ನೆಲುಬಾಗಿ ನಿಂತಿದ್ದ ಈಶ್ವರ್ ರಸ್ತೆ ಅಪಘಾತದಲ್ಲಿ ಮೃತ ಪಟ್ಟಿರುತ್ತಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.’ ಎಂದು ಸಂಗಮೇಶ್ವರ್‌ ತಮ್ಮ ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವಕನಿಗೆ ಇರಿತ, ರಕ್ತದ ಮಡುವಿನಲ್ಲಿದ್ದ ಫೋಟೊ ವೈರಲ್‌, ಏನಿದು ಘಟನೆ? ಹಲ್ಲೆಗೇನು ಕಾರಣ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2023

Leave a Comment