ಭದ್ರಾವತಿಯಲ್ಲಿ ಪೊಲೀಸರ ಕಾರ್ಯಾಚರಣೆ, 35 ವಾಹನಗಳ ಮಾಲೀಕರ ವಿರುದ್ಧ ಕ್ರಮ

ಭದ್ರಾವತಿ: ನಗರದಲ್ಲಿ ಸಂಚಾರ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ, ನಂಬರ್ ಪ್ಲೇಟ್ ಇಲ್ಲದ ಹಾಗೂ ದೋಷಪೂರಿತ ಸೈಲೆನ್ಸರ್ ಹೊಂದಿರುವ 35ಕ್ಕೂ ಹೆಚ್ಚು ವಾಹನಗಳನ್ನು ವಶಕ್ಕೆ ಪಡೆದು ಚಾಲಕರ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕಾರ್ಯಾಚರಣೆ ವೇಳೆ ವಾಹನ ಚಾಲಕರು ಹಾಗೂ ಮಾಲೀಕರ ದಾಖಲೆಗಳನ್ನು ಪರಿಶೀಲಿಸಲಾಯಿತು. ನಿಮ್ಮ ಬದುಕು ನಿಮ್ಮ ಕೈಯಲ್ಲಿದೆ, ನಿಮ್ಮನ್ನು ನಂಬಿ ಇಡೀ ಕುಟುಂಬ ಜೀವಿಸುತ್ತಿದೆ, ಆದ್ದರಿಂದ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ ಎಂದು ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸಿದರು.

Bhadravathi-Police-file-case-against-35-bikes

ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ಪ್ರಕಾಶ್ ರಾಥೋಡ್, ಪೊಲೀಸ್ ನಗರ ವೃತ್ತ ನಿರೀಕ್ಷಕಿ ನಾಗಮ್ಮ, ಪಿಎಸ್‌ಐ ಚಂದ್ರಶೇಖರ್ ನಾಯ್ಕ, ರಾಜೇಶ್ ಸಂಗೊಳ್ಳಿ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.