ಶಿವಮೊಗ್ಗ ಲೈವ್
ಭದ್ರಾವತಿ: ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಹಿನ್ನೆಲೆ ಅಕ್ಟೋಬರ್ 30ರಂದು ಭದ್ರಾವತಿ ನಗರದ ವಿವಿಧೆಡೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)
ಚನ್ನಗಿರಿ ರಸ್ತೆ, ಹೊಳೆಹೊನ್ನೂರು ರಸ್ತೆ, ಇಂದಿರಾ ನಗರ, ಅನ್ವರ್ ಕಾಲೊನಿ, ದುರ್ಗಿನಗರ, ಅಮೀರ್ ಜಾನ್ ಕಾಲೊನಿ, ಮೊಮಿನ್ ಮೊಹಲ್ಲಾ, ಖಲಂದರ್ ನಗರ, ಜಟ್ ಪಟ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
