ಶಿವಮೊಗ್ಗ ಲೈವ್
ಭದ್ರಾವತಿ: ನಗರ ಹಾಗೂ ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಕಾಮಗಾರಿ ನಡೆಸಲಾಗುತ್ತಿದೆ. ಈ ಹಿನ್ನೆಲೆ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ನಡೆಸಲಾಗುತ್ತಿದೆ. ಹೀಗಾಗಿ ನವೆಂಬರ್ 26ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಆನೆಕೊಪ್ಪ ಕುಡಿಯುವ ನೀರು ಸರಬರಾಜು ಘಟಕದ ಸುತ್ತಮುತ್ತಲಿನ ಪ್ರದೇಶಗಳು, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಕಾಗದನಗರ ಅತಿಥಿ ಗೃಹ ಭಾಗ, ಜೆ.ಪಿ.ಎಸ್. ಕಾಲೋನಿ ಹಾಗೂ ಸದರನ್ ಗ್ಯಾಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು ತಿಳಿಸಲಾಗಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
