ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 9 ಡಿಸೆಂಬರ್ 2021
ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಭದ್ರಾವತಿಯ ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ. ಸಾರ್ವಜನಿಕರು ಆಸ್ಪತ್ರೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನರ್ಸಿಂಗ್ ವಿದ್ಯಾರ್ಥಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂದರ್ಭ 24 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ ಮೇರೆಗೆ ಆಸ್ಪತ್ರೆಯ ಒಪಿಡಿ ಮತ್ತು ನರ್ಸಿಂಗ್ ಹಾಸ್ಟೆಲ್ ಬಂದ್ ಮಾಡಲಾಗಿದೆ.
‘ನರ್ಸಿಂಗ್ ಕಾಲೇಜಿನಲ್ಲಿ 24 ಮಂದಿಗೆ ಸೋಂಕು ತಗುಲಿದೆ. ಆದ್ದರಿಂದ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಿ ಮುಂದಿನ ಕ್ರಮ ಕೈಗೊಂಡಿದ್ದೇವೆ’ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.
ನರ್ಸಿಂಗ್ ವಿದ್ಯಾರ್ಥಿಗಳ ಸಂಪರ್ಕದಲ್ಲಿದ್ದವರನ್ನು ತಪಾಸಣೆ ಮಾಡಲಾಗುತ್ತಿದೆ. ಎಲ್ಲರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆ ಮುಂದೆ ಪೊಲೀಸರನ್ನು ನಿಯೋಜಿಸಲಾಗಿದೆ.