ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | BHADRAVATHI NEWS | 16 ಜುಲೈ 2021
ತೂಕದಲ್ಲಿ ವಂಚನೆ ಮಾಡಿದ ಆರೋಪದ ಮೇಲೆ ನ್ಯಾಯಬೆಲೆ ಅಂಗಡಿಯೊಂದರ ಪರವಾನಗಿಯನ್ನೆ ರದ್ದುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಅವರ ಸೂಚನೆ ಮೇರೆಗೆ ಪಡಿತರ ಇಲಾಖೆ ಜಿಲ್ಲಾ ಜಂಟಿ ನಿರ್ದೇಶಕರು ಈ ಕ್ರಮ ಕೈಗೊಂಡಿದ್ದಾರೆ.
ಭದ್ರಾವತಿಯ ಜಿಂಕ್‍ಲೈನ್‍ನಲ್ಲಿರುವ ಕಾಮಧೇನು ನ್ಯಾಯಬೆಲೆ ಅಂಗಡಿಯನ ಪರವಾನಗಿ ಅಮಾನತು ಮಾಡಲಾಗಿದೆ.
ನಗರಸಭೆ ವ್ಯಾಪ್ತಿಯ 31ನೇ ವಾರ್ಡಿಗೆ ಸೇರಿದ ನ್ಯಾಯ ಬೆಲೆ ಅಂಗಡಿ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮಾಪನ ಶಾಸ್ತ್ರ ನಿರೀಕ್ಷಕರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ನ್ಯಾಯ ಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು.
ಇದೇ ಸಮಯದಲ್ಲಿ ಪಡಿತರ ಚೀಟಿಯೊಂದಕ್ಕೆ ಅಕ್ಕಿ ವಿತರಿಸಲಾಗಿತ್ತು. ಅಧಿಕಾರಿಗಳು ಇದನ್ನು ಪರಿಶೀಲಿಸಿದಾಗ 3 ಕೆಜಿ ಅಕ್ಕಿ ಕಡಿಮೆ ಇರುವುದು ಕಂಡು ಬಂದಿತ್ತು. ತೂಕದಲ್ಲಿ ಮೋಸವಾಗುತ್ತಿರುವುದು ಸಾಬೀತಾಗಿ ವಿಶೇಷ ತಂಡವು ಜಿಲ್ಲಾಧಿಕಾರಿಗಳಿಗೆ ನೀಡಿದ ವರದಿ ಆಧರಿಸಿ ಆಹಾರ ಮತ್ತು ಪಡಿತರ ಇಲಾಖೆಯ ಜಂಟಿ ನಿರ್ದೇಶಕ. ಡಾ. ಬಿ.ಟಿ. ಮಂಜುನಾಥ್ ನ್ಯಾಯಬೆಲೆ ಅಂಗಡಿ ಯನ್ನು ಅಮಾನತುಗೊಳಿಸಿದ್ದಾರೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

About The Editor
ನಿತಿನ್ ಆರ್.ಕೈದೊಟ್ಲು
















