ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | BHADRAVATHI NEWS | 15 ಸೆಪ್ಟಂಬರ್ 2020
ತಕ್ಷಣದಿಂದ ಜಾರಿಗೆ ಬರುವಂತೆ ಭದ್ರಾವತಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ತಹಶೀಲ್ದಾರ್ ಅವರಿಗೆ ಭದ್ರಾವತಿಯ ಪ್ರಭಾರ ಜವಾಬ್ದಾರಿ ವಹಿಸಲಾಗಿದೆ.
ಈ ಸಂಬಂಧ ಸೋಮವಾರ ಆದೇಶ ಹೊರಡಿಸಲಾಗಿದೆ. ತಕ್ಷಣದಿಂದಲೇ ಈ ಆದೇಶ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ತಹಶೀಲ್ದಾರ್ ದಿಢೀರ್ ಬಿಡುಗಡೆ ಏಕೆ?
ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ತಹಶೀಲ್ದಾರ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ತಹಶೀಲ್ದಾರ್ ಅವರು ಫೋನ್ ಮೂಲಕ ಸಂಭಾಷಣೆ ನಡೆಸಿರುವ ಆಡಿಯೋ ಕ್ಲಿಪ್ಗಳು ಕೂಡ ಬಯಲಾಗಿದೆ.

ಮಹಿಳೆ ಪರವಾಗಿ ದಲಿತ ಸಂಘಟನೆಗಳು, ಜನಪ್ರತಿನಿಧಿಗಳು ಪ್ರತಿಭಟನೆ ನಡೆಸಿದರು. ತಹಶೀಲ್ದಾರ್ ಅವರನ್ನು ಕೂಡಲೆ ಅಮಾನತು ಮಾಡಿ, ಎಫ್ಐಆರ್ ದಾಖಲಿಸಿ, ಬಂಧಿಸಬೇಕು ಎಂದು ಆಗ್ರಹಿಸಿದವು. ಇದರ ಬೆನ್ನಿಗೆ ಜಿಲ್ಲಾಧಿಕಾರಿ ಅವರು ಈ ಆದೇಶ ಹೊರಡಿಸಿದ್ದಾರೆ.
ನಗರಸಭೆ ಮಾಜಿ ಸದಸ್ಯ ಅಜಿತ್ ಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಮಣಿಶೇಖರ್, ದಲಿತ ಮುಖಂಡ ಹಾಲೇಶಪ್ಪ, ಕುಬೇಂದ್ರನ್, ಮಂಜುನಾಥ್ ಸೇರಿದಂತೆ ಹಲವರು ಹಳೆನಗರ ಠಾಣೆ ಮುಂದೆ ಪ್ರತಿಭಟನೆ ಮಾಡಿ, ದೂರು ದಾಖಲಿಸುವಂತೆ ಒತ್ತಾಯಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






