ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021
ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್ ಡೌನ್ ಮಾಡಲಾಗಿದೆ.
ಭದ್ರಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ 400ಕ್ಕೂ ಹೆಚ್ಚು ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ.
ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್?
ಭದ್ರಾವತಿ ತಾಲೂಕಿನ ಅಂತರಗಂಗೆ ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕೂಡ್ಲಿಗೆರೆ ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು ಪ್ರಕರಣಗಳಿವೆ.
ಅರೆಬಿಳಚಿ, ಹಿರಿಯೂರು ವ್ಯಾಪ್ತಿಯಲ್ಲಿ 20ಕ್ಕಿಂತಲೂ ಹೆಚ್ಚು ಪ್ರಕರಣಗಳು ಇದೆ. ಆನವೇರಿ, ಅರಳಿಕೊಪ್ಪ, ಬಾರಂದೂರು, ದೊಡ್ಡೇರಿ, ದೊಣಬಘಟ್ಟ, ಹೊಳೆಹೊನ್ನೂರು, ಕಲ್ಲಿಹಾಳ್, ಕೋಮಾರನಹಳ್ಳಿ, ನಾಗತಿಬೆಳಗಲು, ಸಿಂಗನಮನೆ, ತಾವರಘಟ್ಟ, ವೀರಾಪುರ, ಯರೇಹಳ್ಳಿ ವ್ಯಾಪ್ತಿಯಲ್ಲಿ ಹತ್ತಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ.
ಅಗರದಹಳ್ಳಿ, ಅರಹತೊಳಲು, ಅರಕೆರೆ, ಅರಳಿಹಳ್ಳಿ, ಅತ್ತಿಗುಂದ, ಬಿಳಕಿ, ದಾಸರಕಲ್ಲಹಳ್ಳಿ, ಎಮ್ಮೆಹಟ್ಟಿ, ಗುಡುಮಘಟ್ಟ, ಹನುಮಂತಾಪುರ, ಕಾಗೆಕೊಡುಮಗ್ಗೆ, ಕಲ್ಲಹಳ್ಳಿ, ಕಂಬದಾಳು ಹೊಸೂರು, ಕಾರೇಹಳ್ಳಿ, ಮಂಗೋಟೆ, ಮಾರಶೆಟ್ಟಿಹಳ್ಳಿ, ಮಾವಿನಕೆರೆ, ಮೈದೊಳಲು, ನಿಂಬೆಗೊಂದಿ, ಸನ್ಯಾಸಿಕೊಡುಮಗ್ಗೆ, ಸಿದ್ಲಿಪುರ, ಸೈದರಕಲ್ಲಹಳ್ಳಿ, ತಡಸ, ಯಡೇಹಳ್ಳಿ ವ್ಯಾಪ್ತಿಯಲ್ಲಿ ಹತ್ತಕ್ಕಿಂತಲೂ ಕಡಿಮೆ ಸಕ್ರಿಯ ಪ್ರಕರಣಗಳಿವೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422