ಭದ್ರಾವತಿ ತಾಲೂಕು ಎರಡು ದಿನ ಸಂಪೂರ್ಣ ಲಾಕ್ ಡೌನ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MAY 2021

ಕರೋನ ಸೋಂಕಿತರು ಮತ್ತು ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಭದ್ರಾವತಿ ತಾಲೂಕನ್ನು ಎರಡು ದಿನ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಲಾಗಿದೆ. ಮೇ 22 ಮತ್ತು 23ರಂದು ಬಂದ್ ಮಾಡಲಾಗುತ್ತದೆ.

ಈ ಕುರಿತು ತಹಶೀಲ್ದರ್ ಜಿ.ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದಾರೆ. ಹಾಲು ಮತ್ತು ಮೆಡಿಕಲ್ ಶಾಪ್ ಹೊರತುಪಡಿಸಿ ಬೇರಾವುದೆ ಅಂಗಡಿಗಳನ್ನು ತೆಗೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಜನರು ಅನಗತ್ಯವಾಗಿ ಸಂಚರಿಸುವುದನ್ನು ಈ ಸಂದರ್ಭ ನಿಷೇಧಿಸಲಾಗಿದೆ. ಸಾರ್ವಜನಿಕರು ಮನೆಯಲ್ಲಿ ಇದ್ದು ಲಾಕ್‍ ಡೌನ್‍ಗೆ ಸಹಕಾರ ನೀಡಬೇಕು ಎಂದು ತಹಶೀಲ್ದಾರ್ ಮನವಿಯಲ್ಲಿ ತಿಳಿಸಿದ್ದಾರೆ.

ಸಚಿವ ಸಭೆ ಬಳಿಕ ನಿರ್ಧಾರ

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಸಂಗಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಪೂರ್ಣ ಲಾಕ್‍ ಡೌನ್ ನಿರ್ಣಯ ಕೈಗೊಳ್ಳಲಾಗಿತ್ತು. ಅದರಂತೆ ತಾಲೂಕು ದಂಡಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ಭದ್ರಾವತಿ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಮೇ 20ರಂದು 207 ಮಂದಿಗೆ ಪಾಸಿಟಿವ್ ಬಂದಿದೆ. ಮೇ 19ರಂದು 133, ಮೇ 18ರಂದು 164, ಮೇ 17ರಂದು 58 ಮಂದಿಗೆ ಸೋಂಕು ತಗುಲಿದೆ. ಹೀಗೆ ಪ್ರತಿದಿನ ದೊಡ್ಡ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗುತ್ತಿರುವುದರಿಂದ ಲಾಕ್‍ ಡೌನ್‍ ಮಾಡಲಾಗುತ್ತಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment