ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 6 ಜನವರಿ 2020
ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಸಲಾಯಿತು. ಬೆಳಗ್ಗೆ ಐದು ಗಂಟೆಗಾಗಲೇ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.
ಬಳಿಕ ದೇವಾಲಯದ ಮುಂದೆ ಸ್ಥಾಪಿಸಲಾಗಿರುವ ಏಳು ಬಾಗಿಲು ತಾನಾಗಿಯೇ ತೆರೆದುಕೊಳ್ಳುವಂತೆ ರೂಪಿಸಲಾಗಿತ್ತು. ಗುಡಿಯೊಳಗೆ ಆಸಿನರಾಗಿದ್ದ ಶ್ರೀ ಲಕ್ಷ್ಮೀ ಹಾಗೂ ನರಸಿಂಹ ಸ್ವಾಮಿಯ ದರ್ಶನವನ್ನು ಸಾವಿರಾರು ಭಕ್ತರು ಪಡೆದುಕೊಂಡರು.
ವೈಕುಂಠ ಏಕಾದಶಿಯಂದು 33 ಕೋಟಿ ದೇವತೆಗಳು ನರಸಿಂಹನ ದರ್ಶನಕ್ಕಾಗಿ ಬರುತ್ತಾರೆ ಎಂಬ ನಂಬಿಕೆ ಭಕ್ತರಲ್ಲಿದೆ. ಹಾಗಾಗಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ವೈಕುಂಠದಂತೆಯೇ ಏಳು ಬಾಗಿಲ ಒಳಗಿರುವ ಸ್ವಾಮಿಯನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422