ತುಮಕೂರಿನ ಲಾಡ್ಜ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಭದ್ರಾವತಿಯ ವ್ಯಕ್ತಿ, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ತುಮಕೂರು: ಭದ್ರಾವತಿ ಮೂಲದ ವ್ಯಕ್ತಿಯೊಬ್ಬರು ಇಲ್ಲಿನ ವಿನೋಬನಗರದ ವಸತಿಗೃಹದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಭರತೇಶ್ (37) ಮೃತಪಟ್ಟವರು. ಇವರು ಅಲ್ಲಿನ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬುಧವಾರ ಮಧ್ಯಾಹ್ನ ಭರತೇಶ್ ತುಮಕೂರಿನ ಲಾಡ್ಜ್‌ನಲ್ಲಿ ಕೊಠಡಿ ಪಡೆದಿದ್ದರು. ರಾತ್ರಿ 8 ಗಂಟೆಯಾದರೂ ಅವರು ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ವಸತಿಗೃಹದ ಸಿಬ್ಬಂದಿ ಕೊಠಡಿಯ ಬಳಿ ಹೋಗಿ ಕರೆದಿದ್ದಾರೆ. ಆದರೆ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ತಕ್ಷಣ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

crime name image

ಪೊಲೀಸರು ಬಂದು ಬಾಗಿಲು ಒಡೆದು ನೋಡಿದಾಗ ಭರತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಲವನ್ನು ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ತುಮಕೂರಿನ ತಿಲಕ್‌ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.