ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಬೈಕ್‌ ಡಿಕ್ಕಿ, ಕಾಲಿನ ಮೂಳೆ ಕಟ್‌, ಸ್ಥಳದಿಂದ ಬೈಕ್‌ ಸವಾರ ಎಸ್ಕೇಪ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಭದ್ರಾವತಿ: ತಾಲೂಕಿನ ದೊಡ್ಡೇರಿಯ ಶಿವನಿ ರಸ್ತೆಯ ಬದಿಯಲ್ಲಿ ವಾಕಿಂಗ್ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಬೈಕ್‌ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಬೆಳಗ್ಗೆ 5 ಗಂಟೆ ಹೊತ್ತಿಗೆ ಕೆಂಪಮ್ಮ ಎಂಬುವವರು ರಸ್ತೆಯ ಎಡಭಾಗದಲ್ಲಿ ವಾಕಿಂಗ್ ಮಾಡುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಬೈಕ್ ಚಾಲಕ ಮಹಿಳೆಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಮಹಿಳೆ ರಸ್ತೆಗೆ ಬಿದ್ದಿದ್ದು, ಬಲಗಾಲಿನ ಮೊಣಕಾಲಿನ ಕೆಳಗೆ ಮೂಳೆ ಮುರಿತವಾಗಿದೆ. ಅಲ್ಲದೆ ತಲೆ ಹಾಗೂ ದೇಹದ ಇತರ ಭಾಗಗಳಿಗೂ ಒಳಪೆಟ್ಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ACCIDENT-NEWS-GENERAL-IMAGE.

ಅಪಘಾತದ ಬಳಿಕ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ತಕ್ಷಣವೇ ಕೆಂಪಮ್ಮ ಅವರನ್ನು ರಕ್ಷಿಸಿದ ಸ್ಥಳೀಯರು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.