ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOLEHONNURU : ಬೈಕಿನಿಂದ ಆಯತಪ್ಪಿ ರಸ್ತೆ ಪಕ್ಕದ ಕಾಲುವೆಗೆ ಬಿದ್ದು ಸವಾರ ಮೃತಪಟ್ಟಿದ್ದಾನೆ. ದಾಸರಕಲ್ಲಹಳ್ಳಿ ಗ್ರಾಮದ ಬಿ.ನೀಲೇಶ್ (25) ಮೃತರು. ಎಮ್ಮೆಹಟ್ಟಿ – ಹೊಳೆಹೊನ್ನೂರು ನಡುವೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕಾಂಕ್ರಿಟ್ ಕೆಲಸಕ್ಕೆ ದಾಸರಕಲ್ಲಹಳ್ಳಿಯ ಮನೆಯಿಂದ ಶಿವಮೊಗ್ಗಕ್ಕೆ ಬೈಕಿನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಎದುರು ಬಂದ ವಾಹನಕ್ಕೆ ದಾರಿ ಬಿಡಲು ರಸ್ತೆ ಅಂಚಿಗೆ ಬೈಕ್ ಚಲಾಯಿಸಿದ್ದಾರೆ. ಆಗ ಆಯತಪ್ಪಿ ಅಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಾಲುವೆಗೆ ಬಿದ್ದಿದ್ದಾರೆ.
ತಲೆಗೆ ತೀವ್ರ ಪೆಟ್ಟಾಗಿದ್ದು, ಪಟ್ಟಣದ ಸರಕಾರಿ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಕೆಲಸ ಹುಡುಕ್ತಿರೋರೆ ಹುಷಾರ್, ಯಾಮಾರಿದ್ರೆ ಶಿವಮೊಗ್ಗದ ಮಹಿಳೆಗಾದ ಸ್ಥಿತಿ ನಿಮಗೂ ಫಿಕ್ಸ್