ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 1 MARCH 2023
BHADRAVATHI : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರ ಅಣಕು ಶವಯಾತ್ರೆ ಮಾಡಿ, ಪ್ರತಿಕೃತಿ (Effigy) ದಹಿಸಿ ವಿಕೃತಿ ಮೆರೆದವರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿ ಭದ್ರಾವತಿ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಅಣಕು (Effigy) ಶವಯಾತ್ರೆ ನಡೆಸಿ ಭದ್ರಾವತಿ ಹಳೆ ಸೇತುವೆ ಬಳಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಎಂಪಿಎಂ, ವಿಐಎಸ್ಎಲ್ ಕಾರ್ಖಾನೆಗಳ ಇವತ್ತಿನ ಸ್ಥಿತಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳೆ ಕಾರಣ. ಈಗ ರಾಜಕೀಯಕ್ಕಾಗಿ ವಿಐಎಸ್ಎಲ್ ಕಾರ್ಮಿಕರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಕೃತಿ ದಹನಕ್ಕೆ ಆಕ್ರೋಶ
ಹುಟ್ಟುಹಬ್ಬದಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರ ಪ್ರತಿಕೃತಿಗಳ ಅಣಕು ಶವಯಾತ್ರೆ ನಡೆಸಿದ್ದಾರೆ. ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರಿಂದಾಗಿ ಭದ್ರಾವತಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೆ ಎಂದು ಬಿಜೆಪಿ ಮುಖಂಡರು ಸ್ಮರಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ವಿಶ್ವವಿದ್ಯಾಲಯ, ಗುಜರಾತ್ ನಲ್ಲಷ್ಟೆ ಇತ್ತು ಈ ವಿವಿ, ಏನಿದರ ವಿಶೇಷತೆ? ಏನೆಲ್ಲ ಕೋರ್ಸ್ ಇದೆ?
ಭದ್ರಾವತಿ ಮಂಡಲದ ಅಧ್ಯಕ್ಷ ಜಿ.ಧರ್ಮಪ್ರಸಾದ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ನಗರಸಭಾ ಸದಸ್ಯರಾದ ವಿ.ಕದಿರೇಶ್, ಅನುಪಮಾ, ಅನ್ನಪೂರ್ಣ, ಕರೀಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422