ಭದ್ರಾವತಿಯಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಣಕು ಶವಯಾತ್ರೆ, ರಸ್ತೆ ತಡೆ

SHIVAMOGGA LIVE NEWS | 1 MARCH 2023

BHADRAVATHI : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರ ಅಣಕು ಶವಯಾತ್ರೆ ಮಾಡಿ, ಪ್ರತಿಕೃತಿ (Effigy) ದಹಿಸಿ ವಿಕೃತಿ ಮೆರೆದವರನ್ನು ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿ ಭದ್ರಾವತಿ ಬಿಜೆಪಿ ಮಂಡಲದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. (ಈ ಸುದ್ದಿಯನ್ನು ಇನ್ನು 72 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

Bhadravathi-BJP-Protest-against-Congress-JDS-Party

ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಅಣಕು (Effigy) ಶವಯಾತ್ರೆ ನಡೆಸಿ ಭದ್ರಾವತಿ ಹಳೆ ಸೇತುವೆ ಬಳಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಎಂಪಿಎಂ, ವಿಐಎಸ್ಎಲ್ ಕಾರ್ಖಾನೆಗಳ ಇವತ್ತಿನ ಸ್ಥಿತಿಗೆ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳೆ ಕಾರಣ. ಈಗ ರಾಜಕೀಯಕ್ಕಾಗಿ ವಿಐಎಸ್ಎಲ್ ಕಾರ್ಮಿಕರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಕೃತಿ ದಹನಕ್ಕೆ ಆಕ್ರೋಶ

ಹುಟ್ಟುಹಬ್ಬದಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರ ಪ್ರತಿಕೃತಿಗಳ ಅಣಕು ಶವಯಾತ್ರೆ ನಡೆಸಿದ್ದಾರೆ. ಈ ಕೃತ್ಯ ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಯಡಿಯೂರಪ್ಪ ಮತ್ತು ಸಂಸದ ರಾಘವೇಂದ್ರ ಅವರಿಂದಾಗಿ ಭದ್ರಾವತಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳಾಗಿವೆ ಎಂದು ಬಿಜೆಪಿ ಮುಖಂಡರು ಸ್ಮರಿಸಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮತ್ತೊಂದು ವಿಶ್ವವಿದ್ಯಾಲಯ, ಗುಜರಾತ್ ನಲ್ಲಷ್ಟೆ ಇತ್ತು ಈ ವಿವಿ, ಏನಿದರ ವಿಶೇಷತೆ? ಏನೆಲ್ಲ ಕೋರ್ಸ್ ಇದೆ?

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಭದ್ರಾವತಿ ಮಂಡಲದ ಅಧ್ಯಕ್ಷ ಜಿ.ಧರ್ಮಪ್ರಸಾದ್, ಭದ್ರಾ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ, ನಗರಸಭಾ ಸದಸ್ಯರಾದ ವಿ.ಕದಿರೇಶ್, ಅನುಪಮಾ, ಅನ್ನಪೂರ್ಣ, ಕರೀಗೌಡ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

JNNCE College Shimoga VTU Ranking

Bhadravathi-BJP-Protest-against-Congress-JDS-Party

Leave a Comment