ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
BHADRAVATHI NEWS, 9 SEPTEMBER 2024 : ಬಿಜೆಪಿಯಿಂದ ಉಚ್ಛಾಟನೆಗೊಂಡ ಮೂವರು ನಗರಸಭೆ ಸದಸ್ಯರು (Members) ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಶಾಸಕ ಸಂಗಮೇಶ್ವರ್ ಅವರು ತಮ್ಮ ಫೇಸ್ಬುಕ್ನಲ್ಲಿ ಇದನ್ನು ಪ್ರಕಟಿಸಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನಗರಸಭೆ ಸದಸ್ಯರಾದ ವಿ.ಕದಿರೇಶ್, ಅನಿತಾ ಮಲ್ಲೇಶ್ ಮತ್ತು ಶಶಿಕಲಾ ನಾರಾಯಣಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬಿಜೆಪಿಯಿಂದ 6 ವರ್ಷ ಉಚ್ಛಾಟನೆ
ಕಳೆದ ತಿಂಗಳು ಭದ್ರವತಿ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಮೂವರು ಬಿಜೆಪಿ ನಗರಸಭೆ ಸದಸ್ಯರು ಚುನಾವಣೆಗೆ ಗೈರಾಗಿದ್ದರು. ವಿಪ್ ಉಲ್ಲಂಘಿಸಿದ ಹಿನ್ನೆಲೆ ಮೂವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಛಾಟಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಆದೇಶಿಸಿದ್ದರು.
ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ಗೆ
ಬಿಜೆಪಿಯ ಉಚ್ಛಾಟಿತ ನಗರಸಭೆ ಸದಸ್ಯರ ನಡೆ ಕುರಿತು ತೀವ್ರ ಕುತೂಹಲವಿತ್ತು. ಈಗ ಮೂವರು ಸದಸ್ಯರು ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇವರೊಂದಿಗೆ ಕದಿರೇಶ್ ಅವರ ಪುತ್ರ, ಬಿಜೆಪಿಯ ಹಿಂದುಳಿದ ವರ್ಗ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಕೆ.ಮಂಜುನಾಥ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಾಲು ಸಾಲು ಅಧಿಕಾರಿಗಳ ಮನೆಗಳ ಬೀಗ ಒಡೆದು ಕಳ್ಳತನ, ಎಲ್ಲಿ? ಹೇಗಾಯ್ತು?