ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | BHADRAVATHI NEWS | 4 ಜನವರಿ 2022
ಸಂಸದ ಡಿ.ಕೆ.ಸುರೇಶ್ ವಿರುದ್ಧ ಭದ್ರಾವತಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾವತಿಯ ಮಧ್ವಾಚಾರ್ಯ ಸರ್ಕಲ್ ಬಿಜೆಪಿ ಭದ್ರಾವತಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಅಶ್ವಥನಾರಾಯಣ ಅವರ ಭಾಷಣಕ್ಕೆ ಅಡ್ಡಿಪಡಿಸಿ, ಸಂಸದ ಡಿ.ಕೆ.ಸುರೇಶ್ ಅವರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಭದ್ರಾವತಿ ಬಿಜೆಪಿ ಅಧ್ಯಕ್ಷ ಎಂ.ಪ್ರಭಾಕರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಾಥ್, ಧರ್ಮ ಪ್ರಸಾದ್, ರಾಜ್ಯ ಕಾರ್ಯಕಾರಣಿ ಸದಸ್ಯೆ ಶೋಭಾ, ಭೋವಿ ಅಭಿವೃದ್ಧಿ ನಿಗಮ ಮಂಡಳಿಯ ನಿರ್ದೇಶಕ ಆನಂದ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422