‘ಭದ್ರಾವತಿಯಲ್ಲಿ ಆರ್‌ಎಎಫ್ ಘಟಕ ಬರಲು ಕಾಂಗ್ರೆಸ್ ಕಾರಣ’, ಈತನಕ ಶಾಸಕರಿಗೆ ಬಂದಿಲ್ಲವಂತೆ ಆಹ್ವಾನ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021

ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಪಡೆ (ಆರ್‍ಎಎಫ್‍) ಘಟಕ ಸ್ಥಾಪನೆ ಬಿಜೆಪಿಯ ಸಾಧನೆಯಲ್ಲ. ಹಿಂದಿನ ಕಾಂಗ್ರೆಸ್ ಸರ್ಕಾರದ ಕೊಡುಗೆ ಅಂತಾ ಶಾಸಕ ಸಂಗಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಗಮೇಶ್ವರ್, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭ ಕೋಲಾರದ ಕೆಜಿಎಫ್‍ನಲ್ಲಿ ಆರ್‌ಎಎಫ್ ಘಟಕ ಸ್ಥಾಪನೆಗೆ ನಿರ್ಧರಿಸಲಾಗಿತ್ತು. ಆ ಸಂದರ್ಭ ಘಟಕವನ್ನು ಭದ್ರಾವತಿಯಲ್ಲಿ ಸ್ಥಾಪಿಸುವಂತೆ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿ ಭದ್ರಾವತಿಯಲ್ಲಿ ಘಟಕ ಸ್ಥಾಪನೆಗೆ ಮನವಿ ಮಾಡಲಾಗಿತ್ತು. ಆದರೆ ಕಾರಣಾಂತರಗಳಿಂದ ಕೆಲಸ ಆರಂಭವಾಗಿರಲಿಲ್ಲ.

ಆಹ್ವಾನ ಬಂದಿಲ್ಲ

ಆರ್‍ಎಎಫ್‍ ಘಟಕದ ಶಂಕುಸ್ಥಾಪನೆಗೆ ಭದ್ರಾವತಿಗೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಸ್ವಾಗತ ಕೋರುತ್ತೇನೆ ಎಂದು ತಿಳಿಸಿದ ಸಂಗಮೇಶ್ವರ್ ಅವರು, ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ಬಂದಿಲ್ಲ ಎಂದರು. ಆಹ್ವಾನ ಬಂದರೆ ಹೋಗುತ್ತೇನೆ. ರಾಜ್ಯ ಸರ್ಕಾರ ಜಾಗ ಕೊಡುತ್ತಿರುವುದರಿಂದ ಕ್ಷೇತ್ರದ ಜನಪ್ರತಿನಿಧಿಯಾದ ತಮಗೆ ಆಹ್ವಾನ ನೀಡಬೇಕು. ಆದರೆ ಈತನಕ ಆಹ್ವಾನ ಬಂದಿಲ್ಲ ಎಂದರು.

ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ.ಚಂದ್ರೇಗೌಡ, ಗ್ರಾಮಾಂತರ ಅಧ್ಯಕ್ಷ ಹೆಚ್.ಎಲ್.ಷಡಾಕ್ಷರಿ, ಮಂಜುಳಮ್ಮ, ಬಿ.ಟಿ.ನಾಗರಾಜ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment