ಭದ್ರಾವತಿ: ತಾಲೂಕಿನ ಕಲ್ಲಾಪುರ ಬಳಿ ಕೋಡಿ ಹೊಸೂರು ಗ್ರಾಮದಲ್ಲಿ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ನಿರತರಾಗಿದ್ದ ಬೂತ್ ಮಟ್ಟದ ಮಹಿಳಾ ಅಧಿಕಾರಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಭದ್ರಾವತಿ ತಾಲೂಕಿನ ಕಲ್ಲಾಪುರದ ಅಂಗನವಾಡಿ ಶಿಕ್ಷಕಿ ಮಂಜುಳಾ (50) ಮೃತ ಅಧಿಕಾರಿ.

ಹೇಗಾಯ್ತು ಘಟನೆ?
ಕೋಡಿ ಹೊಸೂರು ಗ್ರಾಮ ಪಿಡಿಒ, ಬಿಎಲ್‌ಓ ಮಂಜುಳಾ ಹಾಗೂ ಸಹಾಯಕ ಸಿಬ್ಬಂದಿ ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಮಂಜುಳಾ ಅವರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಸಹೋದ್ಯೋಗಿಗಳು ಅವರನ್ನು ಅರಬಿಳಚಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದರು.
ಹೆಚ್ಚಿನ ಚಿಕಿತ್ಸೆಗಾಗಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿತ್ತು. ಅಷ್ಟರಲ್ಲಿ ಮಂಜುಳಾ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹ ಇರಿಸಲಾಗಿದೆ. ತಾಲೂಕು ಮಟ್ಟದ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.