ಶಿವಮೊಗ್ಗ ಲೈವ್
ಭದ್ರಾವತಿ: ನಗರದ ಮಾಧವಾಚಾರ್‌ವೃತ್ತದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ವಿಶ್ವಕರ್ಮ ಶಿಲ್ಪಿ ಅಮರಶಿಲ್ಪಿ ಜಕಣಚಾರಿ ಸೇತುವೆ ಕೆಳಭಾಗ ಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಹಳೇನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಹಿನ್ನೆಲೆ ನದಿ ದಂಡೆಯಲ್ಲಿಯೂ ಪರಿಶೀಲನೆ ನಡೆಸಿರುವ ಪೊಲೀಸರು ಮೃತ ವ್ಯಕ್ತಿಯ ಗುರುತು ಪತ್ತೆಹಚ್ಚಲು ಕ್ರಮ ಕೈಗೊಂಡಿದ್ದಾರೆ.

ಮೃತ ವ್ಯಕ್ತಿಯ ಗುರುತು ತಿಳಿದಿರುವವರು ಅಥವಾ ಅವರ ಕುಟುಂಬದ ಬಗ್ಗೆ ಮಾಹಿತಿ ಹೊಂದಿರುವವರು ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.