ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 APRIL 2023
BHADRAVATHI / UDUPI : ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಿದುಳು (Brain) ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಲು ಕುಟುಂಬದವರು ನಿರ್ಧರಸಿದ್ದಾರೆ. ಏಳು ಮಂದಿಗೆ ಅಂಗಾಂಗ ದಾನ ಮಾಡಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭದ್ರಾವತಿ ತಾಲೂಕು ಕೆಂಚನಹಳ್ಳಿ ಗ್ರಾಮದ ನೀರಗುಂಡಿ ರಾಜಪ್ಪ ಎಂಬುವವರ ಮಗ ಉಲ್ಲಾಸ್.ಆರ್ (21) ಅವರ ಅಂಗಾಂಗ ದಾನ ಮಾಡಲಾಗಿದೆ. ಏ.22ರಂದು ಉಲ್ಲಾಸ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಏ.23ರಂದು ಆತನನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಉಲ್ಲಾಸ್ ಅವರ ಮಿದುಳು (Brain) ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆ ಕುಟುಂಬದವರು ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳ ಬಳಿ ಸಿಕ್ಕ ಆಸ್ತಿ, ಚಿನ್ನಾಭರಣ, ವಾಹನಗಳೆಷ್ಟು?
ಹೃದಯ, ಶ್ವಾಸಕೋಶ, ಮೂತ್ರಪಿಂಡಗಳು, ಯಕೃತ್ ಮತ್ತು ಎರಡು ಕಾರ್ನಿಯಾಗಳನ್ನು ದಾನ ಮಾಡಲಾಗಿದೆ. ಶ್ವಾಸಕೋಶವನ್ನು ಚೆನ್ನೈ ಅಪೋಲೊ ಆಸ್ಪತ್ರೆ, ಯಕೃತ್ ಅನ್ನು ಬೆಂಗಳೂರು ಅಸ್ಟರ್ ಸಿಎಂಐ ಆಸ್ಪತ್ರೆ, ಮೂತ್ರಪಿಂಡವನ್ನು ಮಂಗಳೂರಿನ ಎ.ಜೆ.ಆಸ್ಪತ್ರೆ, ಎರಡು ಕಾರ್ನಿಯ ಮತ್ತು ಒಂದು ಮೂತ್ರಪಿಂಡವನ್ನು ಮಣಿಪಾಲದ ನೋಂದಾಯಿತ ರೋಗಿಗಳಿಗೆ ಅಳವಡಿಸಲಾಗಿದೆ.