ಶಂಕರಘಟದಲ್ಲಿ ಬಸ್ಸಿನ ಟೈರ್‌ ಸ್ಫೋಟ, ಬೈಕ್‌ ಸವಾರ ಸಾವು, ಹೇಗಾಯ್ತು ಘಟನೆ?

 ಶಿವಮೊಗ್ಗ  LIVE 

ಭದ್ರಾವತಿ: ಖಾಸಗಿ ಬಸ್ಸಿನ ಟೈರ್ ಸ್ಫೋಟಗೊಂಡು (Tire Burst) ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಕಣಗಲಸರ ಗ್ರಾಮದ ನಿವಾಸಿ ಬೀರು (42) ಮೃತಪಟ್ಟವರು. ಅದೇ ಬೈಕಿನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಲಕ್ಷ್ಮಿ ಎಂಬುವವರಿಗೆ ಗಾಯವಾಗಿದೆ.

ಬೀರು ಅವರು ಲಕ್ಷ್ಮಿ ಅವರನ್ನು ಬೈಕ್‌ನಲ್ಲಿ ಕುರಿಸಿಕೊಂಡು ಆಸ್ಪತ್ರೆಗೆ ಹೋಗಿ ವಾಪಸ್ ಬರುತ್ತಿದ್ದರು. ಶಂಕರಘಟ್ಟ ಗ್ರಾಮದ ಅಂಗಾಳ ಪರಮೇಶ್ವರಿ ದೇವಸ್ಥಾನದ ಬಳಿ ಸಂಚರಿಸುತ್ತಿದ್ದಾಗ, ಎದುರುಗಡೆಯಿಂದ ಬಂದ ಖಾಸಗಿ ಬಸ್ ಇವರ ಬೈಕನ್ನು ದಾಟಿದ ತಕ್ಷಣ ಅದರ ಟೈರ್ ಸ್ಫೋಟಗೊಂಡಿದೆ. ಈ ವೇಳೆ ಬಸ್ಸಿನಿಂದ ಸಿಡಿದ ವಸ್ತು ಬೈಕ್ ಚಲಾಯಿಸುತ್ತಿದ್ದ ಬೀರು ಅವರ ತಲೆಗೆ ಬಲವಾಗಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ರಸ್ತೆಯಲ್ಲಿ ದಿಢೀರ್‌ ಎದುರಿಗೆ ಬಂದ ಮುಸುಕುಧಾರಿ, ಖಾರದ ಪುಡಿ ಎರಚಿ, ಗೃಹಿಣಿ ತಲೆಗೆ ರಾಡ್‌ನಿಂದ ಹೊಡೆತ

ತೀವ್ರವಾಗಿ ಗಾಯಗೊಂಡಿದ್ದ ಬೀರು ಅವರನ್ನು ಶಿವಮೊಗ್ಗದ ಮೆಗ್ಗಾನ್ ಮತ್ತು ಮ್ಯಾಕ್ಸ್ ಆಸ್ಪತ್ರೆಗಳಿಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದ ಕಾರಣ ಜನವರಿ 6 ರಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಬಸ್ ಚಾಲಕನ ನಿರ್ಲಕ್ಷ್ಯದ ವಿರುದ್ಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment