‘ಮಿನಿಸ್ಟರ್’ಗಳನ್ನು ಭೇಟಿಯಾಗಿ, ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ, VISL ವಿಚಾರದಲ್ಲಿ ಯಾವತ್ತೂ ರಾಜಕೀಯ ಮಾಡಿಲ್ಲ’

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | 10 ಏಪ್ರಿಲ್ 2019

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ವಿಐಎಸ್ಎಲ್ ಕಾರ್ಖಾನೆ ವಿಚಾರದಲ್ಲಿ ರಾಜಕೀಯ ಮಾಡಿಲ್ಲ. ಇದರ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೇನೆ ಅಂತಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.

ಭದ್ರಾವತಿಯ ಜನ್ನಾಪುರದ ಜಯಶ್ರೀ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಸಮಾವೇಶದಲ್ಲಿ ರಾಘವೇಂದ್ರ ಮಾತನಾಡಿದರು. ಕಾರ್ಖಾನೆಯ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಕಳೆದ ಮೂರು ತಿಂಗಳಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಕಾರ್ಖಾನೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.

ವಿಐಎಸ್ಎಲ್ ಕಾರ್ಮಿಕರ ಮನೆಗಳ ನವೀಕರಣ, ಕಾರ್ಖಾನೆಗೆ ಅವಶ್ಯಕತೆ ಇರುವ ಕಚ್ಚಾ ವಸ್ತುಗಳ ಪೂರೈಕೆ, ರಮಣದುರ್ಗದಲ್ಲಿ ಗಣಿ ಮಂಜೂರು ಮಾಡಿಸಲಾಗಿದೆ. ಕಾರ್ಖಾನೆಯ ಇನ್ನುಳಿದ ಅಭಿವೃದ್ಧಿಗೆ ಸಂಬಂಧಿಸಿದ ಕಡತವನ್ನು ಶೀಘ್ರ ವಿಲೇವಾರಿ ಮಾಡಿಸಬೇಕಿದೆ ಅಂತಾ ರಾಘವೇಂದ್ರ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪ್ರಮುಖರಾದ ಪ್ರವೀಣ್ ಪಟೇಲ್, ವಿ.ಕದಿರೇಶ್, ಎಸ್ ದತ್ತಾತ್ರಿ, ಎಸ್ ಎಸ್ ಜ್ಯೋತಿ ಪ್ರಕಾಶ್, ಕೆ.ಎಸ್.ಭೈರಪ್ಪಗೌಡ, ನಾಗಭೂಷಣ್, ಜೆ.ಜಗದೀಶ್, ರಾಮಲಿಂಗಯ್ಯ, ವಿಶ್ವನಾಥ್ ರಾವ್ ಸೇರಿದಂತೆ ಹಲವರಿದ್ದಾರೆ.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment