ಶಿವಮೊಗ್ಗ ಲೈವ್.ಕಾಂ | 10 ಏಪ್ರಿಲ್ 2019
ವಿಐಎಸ್ಎಲ್ ಕಾರ್ಖಾನೆ ವಿಚಾರದಲ್ಲಿ ರಾಜಕೀಯ ಮಾಡಿಲ್ಲ. ಇದರ ಅಭಿವೃದ್ಧಿಗೆ ಪ್ರಯತ್ನ ಮಾಡಿದ್ದೇನೆ ಅಂತಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.
ಭದ್ರಾವತಿಯ ಜನ್ನಾಪುರದ ಜಯಶ್ರೀ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ವಿಐಎಸ್ಎಲ್ ನಿವೃತ್ತ ಕಾರ್ಮಿಕರ ಸಮಾವೇಶದಲ್ಲಿ ರಾಘವೇಂದ್ರ ಮಾತನಾಡಿದರು. ಕಾರ್ಖಾನೆಯ ಅಭಿವೃದ್ಧಿಗೆ ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಕಳೆದ ಮೂರು ತಿಂಗಳಲ್ಲಿ ಕೇಂದ್ರ ಸಚಿವರನ್ನು ಭೇಟಿ ಮಾಡಿ, ಕಾರ್ಖಾನೆ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.
ವಿಐಎಸ್ಎಲ್ ಕಾರ್ಮಿಕರ ಮನೆಗಳ ನವೀಕರಣ, ಕಾರ್ಖಾನೆಗೆ ಅವಶ್ಯಕತೆ ಇರುವ ಕಚ್ಚಾ ವಸ್ತುಗಳ ಪೂರೈಕೆ, ರಮಣದುರ್ಗದಲ್ಲಿ ಗಣಿ ಮಂಜೂರು ಮಾಡಿಸಲಾಗಿದೆ. ಕಾರ್ಖಾನೆಯ ಇನ್ನುಳಿದ ಅಭಿವೃದ್ಧಿಗೆ ಸಂಬಂಧಿಸಿದ ಕಡತವನ್ನು ಶೀಘ್ರ ವಿಲೇವಾರಿ ಮಾಡಿಸಬೇಕಿದೆ ಅಂತಾ ರಾಘವೇಂದ್ರ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಪ್ರಮುಖರಾದ ಪ್ರವೀಣ್ ಪಟೇಲ್, ವಿ.ಕದಿರೇಶ್, ಎಸ್ ದತ್ತಾತ್ರಿ, ಎಸ್ ಎಸ್ ಜ್ಯೋತಿ ಪ್ರಕಾಶ್, ಕೆ.ಎಸ್.ಭೈರಪ್ಪಗೌಡ, ನಾಗಭೂಷಣ್, ಜೆ.ಜಗದೀಶ್, ರಾಮಲಿಂಗಯ್ಯ, ವಿಶ್ವನಾಥ್ ರಾವ್ ಸೇರಿದಂತೆ ಹಲವರಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200