ಭದ್ರಾವತಿ ಜಂಕ್ಷನ್‌ ಸಮೀಪ ಅಪಘಾತ, ಯುವಕ ಸಾವು, ಕಾರಿನ ಮುಂಭಾಗ ನಜ್ಜುಗುಜ್ಜು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಭದ್ರಾವತಿ: ಫೋರ್ಡ್ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರಿನಲ್ಲಿದ್ದ ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಭದ್ರಾವತಿ ತಾಲೂಕು ಜಂಕ್ಷನ್‌ ಸಮೀಪದ ರಂಗನಾಥಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಎಂಜಿನ್‌ ಭಾಗವ ತುಂಡಾಗಿ ಹೊರಗೆ ಬಿದ್ದಿದೆ. ಘಟನೆಯಲ್ಲಿ ಶಿವಮೊಗ್ಗ ಮೂಲದ ಓರ್ವ ಯುವಕ ಸಾವನ್ನಪ್ಪಿದ್ದಾನೆ. ಮತ್ತೊಬ್ಬ ಯುವಕ ಗಂಭೀರ ಗಾಯಗೊಂಡಿದ್ದಾನೆ. ಭದ್ರಾವತಿ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Car-accident-near-Ranganathapura-in-Shankaraghatta-road.