ಭದ್ರಾವತಿ: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ (Collision) ಐದು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರಿನ ಚಾಲನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಭದ್ರಾವತಿಯ ಪೇಪರ್ ಟೌನ್ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಶಿವಕುಮಾರ್, ಅಂಬರೀಷ, ಶಿವಶಂಕರ, ಪ್ರದೀಪ, ಮಂಜುನಾಥ ಎಂಬುವವರು ಗಾಯಗೊಂಡಿದ್ದಾರೆ.
ಅಂತರಗಂಗೆಯ ಪ್ರದೀಪ, ಅಂಬರೀಷ ಮತ್ತು ಶಿವಕುಮಾರ್ ಎಂಬುವವರು ಉಜ್ಜನಿಪುರ ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದರು. ತರೀಕೆರೆ ಕಡೆಯಿಂದ ಬಂದ ಕಾರೊಂದು ಇವರ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ಪ್ರದೀಪ ಅವರ ಕಾಲಿಗೆ ಗಂಭೀರ ಗಾಯವಾಗಿ ಮೂಳೆ ಮುರಿದಿದೆ. ಅಂಬರೀಷ, ಶಿವಕುಮಾರ್ ಅವರು ಗಾಯಗೊಂಡಿದ್ದಾರೆ.
ಮತ್ತೊಂದು ಕಾರಿನಲ್ಲಿದ್ದ ಚಾಲಕ ಸೀನ, ಶಿವಶಂಕರ್, ಮಂಜುನಾಥ ಅವರು ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಪೇಪರ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಕಾರ್ಮಿಕರಿಗೆ ಹಣ ವರ್ಗಾಯಿಸಲು ಬ್ಯಾಂಕ್ ಅಕೌಂಟ್ ಪರಿಶೀಲಿಸಿದ ಉದ್ಯಮಿಗೆ ಕಾದಿತ್ತು ಶಾಕ್
Collision
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






