ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 MAY 2024
BHADRAVATHI : ದಾನವಾಡಿಯಲ್ಲಿ ಎಂಪಿಎಂಗೆ ಗುತ್ತಿಗೆ ನೀಡಿರುವ ನೀಲಗಿರಿ ನೆಡುತೋಪಿನಲ್ಲಿ ಮರ ಕಡಿದ ಆರೋಪದ ಹಿನ್ನೆಲೆ 14 ಮಹಿಳೆಯರ ವಿರುದ್ಧ ಭದ್ರಾವತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಏ.26ರಂದು ಮರ ಕಡಿಯುತ್ತಿರುವ ಶಬ್ದ ಕೇಳಿ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಹೋದಾಗ ಮಹಿಳೆಯರು ಅಕ್ರಮವಾಗಿ ಮರ ಕಡಿಯುತ್ತಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಮಹಿಳೆಯರು ಮರ ಕಡಿತಲೆ ಮಾಡಿದ್ದರಿಂದ ಸರ್ಕಾರಕ್ಕೆ 50 ಸಾವಿರ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಅನುಮತಿ ಪಡೆದು, ಮಹಿಳೆಯರ ವಿರುದ್ಧ ಸಹಾಯಕ ಅರಣ್ಯಾಧಿಕಾರಿ ಕೃಷ್ಣ ಹನುಮಂತಪ್ಪ ಸಾರಥಿ ಎಂಬುವವರು ದೂರು ನೀಡಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ನಾಳೆ ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಷ್ಟೊತ್ತಿಗೆ ಬರ್ತಾರೆ? ಎಲ್ಲಿಗೆಲ್ಲ ಭೇಟಿ ನೀಡ್ತಾರೆ?
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು
















